Connect with us

    LATEST NEWS

    ಯಮುನೆಯ ಆರ್ಭಟಕ್ಕೆ ಮುಳುಗಿದ ದೆಹಲಿ…!!

    ನವದೆಹಲಿ ಜುಲೈ 13 :ಯಮುನಾ ನದಿಯ ಆರ್ಭಟಕ್ಕೆ ರಾಷ್ಟ್ರರಾಜಧಾನಿ ದೆಹಲಿ ಅಕ್ಷರಶಃ ನಲುಗಿದ್ದು, ಸಿಎಂ ನಿವಾಸದವರೆಗೂ ಇದೀಗ ನೀರು ಬಂದಿದೆ. ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಅಗತ್ಯ ವಸ್ತುಗಳ ಟ್ರಕ್‌ಗಳಿಗೆ ಮಾತ್ರ ದೆಹಲಿಯಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ.


    ಉತ್ತರಭಾರತದಲ್ಲಿ ಮುಂಗಾರು ಮಳೆ ಭಾರೀ ಅವಾಂತರವನ್ನೇ ಸೃಷ್ಠಿಸಿದೆ. ಹಿಮಾಚಲ ಪ್ರದೇಶದಲ್ಲಿ ಪ್ರಳಯದ ಸ್ಥಿತಿ ತಂದಿದ್ದ ಮಳೆ ಇದೀಗ ರಾಷ್ಟ್ರ ರಾಜಧಾನಿಯನ್ನು ನೀರಲ್ಲಿ ಮುಳುಗಿಸಿದೆ. ಉಕ್ಕಿ ಹರಿಯುತ್ತಿರುವ ಯಮುನಾ ನದಿ ಹರಿವು ಗುರುವಾರ ಬೆಳಗ್ಗೆ ಗರಿಷ್ಠ ಮಟ್ಟಕ್ಕೆ ಏರಿದ್ದು, ತೀರ ಸಮೀಪದ ಪ್ರದೇಶಗಳಲ್ಲಿನ ರಸ್ತೆಗಳು, ಸಾರ್ವಜನಿಕ ಹಾಗೂ ಖಾಸಗಿ ಮೂಲಸೌಕರ್ಯಗಳು ಜಲಾವೃತಗೊಂಡಿವೆ. ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೀರಿನ ಪ್ರಮಾಣ ಹಳೇ ರೈಲು ಸೇತುವೆ ಬಳಿ ಬುಧವಾರ ರಾತ್ರಿ 208 ಮೀಟರ್‌ಗೆ ತಲುಪಿತ್ತು. ಆ ಪ್ರಮಾಣ ಇಂದು ಬೆಳಗ್ಗೆ 8ರ ಹೊತ್ತಿಗೆ 208.48 ಮೀಟರ್‌ಗೆ ಏರಿದೆ. ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ‘ಇದು ಮಿತಿ ಮೀರಿದ ಪರಿಸ್ಥಿತಿ’ ಎನ್ನಲಾಗಿದೆ.

    ಇನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು, ಪರಿಸ್ಥಿತಿ ನಿಯಂತ್ರಣ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತುರ್ತಾಗಿ ಮಧ್ಯಪ್ರವೇಶಿಸಬೇಕು ಎಂದು ಬುಧವಾರ ಆಗ್ರಹಿಸಿದ್ದು, ಜನರು ಕಾನೂನುಬಾಹಿರವಾಗಿ ಗುಂಪುಗೂಡುವುದನ್ನು ತಡೆಯಲು ನಗರ ಪೊಲೀಸರು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆಯ ದೃಷ್ಟಿಯಿಂದ ಸೆಕ್ಷನ್‌ 144 (ನಿಷೇಧಾಜ್ಞೆ) ಜಾರಿಗೊಳಿಸಬೇಕು ಎಂದಿದ್ದಾರೆ. ಅಲ್ಲದೆ ‘ದೆಹಲಿಯಲ್ಲಿ ಎರಡು ದಿನದಿಂದ ಮಳೆಯಾಗಿಲ್ಲ. ಹರಿಯಾಣದ ಹಥಿನೀಕುಂಡ್‌ ಬ್ಯಾರೇಜ್‌ನಿಂದ ಅಸಹಜವಾಗಿ ಹೆಚ್ಚು ನೀರನ್ನು ಬಿಡುಗಡೆ ಮಾಡುತ್ತಿರುವುದರಿಂದ ಯಮುನಾ ನದಿಯ ಮಟ್ಟ ಹೆಚ್ಚಿದೆ. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ನೀರಿನ ಮಟ್ಟ ಹೆಚ್ಚಾಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿರುವ ಕೇಜ್ರಿವಾಲ್, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೂ ಈ ಸಂಬಂಧ ಪತ್ರ ಬರೆದಿದ್ದು, ಕೆಲವೇ ವಾರಗಳಲ್ಲಿ ದೆಹಲಿಯಲ್ಲಿ ಜಿ20 ಸಮ್ಮೇಳನ ನಡೆಯಲಿದೆ ಎಂಬುದನ್ನು ಉಲ್ಲೇಖಿಸಿರುವ ಅವರು, ಹರಿಯಾಣದ ಹಥಿನೀಕುಂಡ್‌ ಬ್ಯಾರೇಜ್‌ನಿಂದ ನಿಧಾನವಾಗಿ ನೀರು ಹರಿಸುವಂತೆ ಸೂಚಿಸಬೇಕು ಎಂದು ಮನವಿ ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply