FILM
ರಶ್ಮಿಕಾ ಮಂದಣ್ಣ ಡೀಫ್ ಫೇಕ್ ವಿಡಿಯೋ ಮಾಡಿದ ಆರೋಪಿ ಅರೆಸ್ಟ್
ಬೆಂಗಳೂರು ಜನವರಿ 20: ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋ ಕ್ರಿಯೆಟ್ ಮಾಡಿದ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಆದರೆ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೊಗೆ ಕಾರಣರಾದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ವ್ಯಕ್ತಿಯನ್ನು ಹೈದರಾಬಾದ್‌ನಲ್ಲಿ ಬಂಧಿಸಲಾಗಿದ್ದು ಆತನನ್ನು ದೆಹಲಿಗೆ ಕರೆತರಲಾಗುತ್ತಿದೆ ಎಂದು ವರದಿಯಾಗಿದೆ. ಕಳೆದ ನವೆಂಬರ್‌ನಲ್ಲಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು. ಈ ಬಗ್ಗೆ ರಶ್ಮಿಕಾ ಮಂದಣ್ಣ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.
ಹೊರದೇಶದಲ್ಲಿರುವ ಭಾರತೀಯ ಮೂಲದ ಸೋಶಿಯಲ್ ಮೀಡಿಯಾ ಇನ್‌ಫ್ಲುಯೇನ್ಸರ್ ಝಾರಾ ಪಟೇಲ್ ಲಿಫ್ಟ್‌ಗೆ ಪ್ರವೇಶ ಮಾಡುತ್ತಿರುವ ವಿಡಿಯೊ ಇಟ್ಟುಕೊಂಡು ರಶ್ಮಿಕಾ ಮಂದಣ್ಣ ಮುಖ ಜೋಡಿಸಿ ವಿಡಿಯೊ ಮಾಡಿ ಹರಿಬಿಟ್ಟಿದ್ದರು.