Connect with us

    FILM

    ರಶ್ಮಿಕಾ ಮಂದಣ್ಣ ಡೀಫ್ ಫೇಕ್ ವಿಡಿಯೋ ಮಾಡಿದ ಆರೋಪಿ ಅರೆಸ್ಟ್

    ಬೆಂಗಳೂರು ಜನವರಿ 20: ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋ ಕ್ರಿಯೆಟ್ ಮಾಡಿದ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಆದರೆ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೊಗೆ ಕಾರಣರಾದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.


    ಈ ವ್ಯಕ್ತಿಯನ್ನು ಹೈದರಾಬಾದ್‌ನಲ್ಲಿ ಬಂಧಿಸಲಾಗಿದ್ದು ಆತನನ್ನು ದೆಹಲಿಗೆ ಕರೆತರಲಾಗುತ್ತಿದೆ ಎಂದು ವರದಿಯಾಗಿದೆ. ಕಳೆದ ನವೆಂಬರ್‌ನಲ್ಲಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು. ಈ ಬಗ್ಗೆ ರಶ್ಮಿಕಾ ಮಂದಣ್ಣ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

    ಹೊರದೇಶದಲ್ಲಿರುವ ಭಾರತೀಯ ಮೂಲದ ಸೋಶಿಯಲ್ ಮೀಡಿಯಾ ಇನ್‌ಫ್ಲುಯೇನ್ಸರ್ ಝಾರಾ ಪಟೇಲ್ ಲಿಫ್ಟ್‌ಗೆ ಪ್ರವೇಶ ಮಾಡುತ್ತಿರುವ ವಿಡಿಯೊ ಇಟ್ಟುಕೊಂಡು ರಶ್ಮಿಕಾ ಮಂದಣ್ಣ ಮುಖ ಜೋಡಿಸಿ ವಿಡಿಯೊ ಮಾಡಿ ಹರಿಬಿಟ್ಟಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply