Connect with us

FILM

ಖ್ಯಾತ ಸಂಗೀತ ನಿರ್ದೇಶಕ ಬಪ್ಪಿ ಲಹಿರಿ ನಿಧನ

ಮುಂಬೈ: ಬಾಲಿವುಡ್ ನ ಹಿರಿಯ ಸಂಗೀತ ನಿರ್ದೇಶಕ ಬಪ್ಪಿ ಲಹಿರಿ ಇಂದು ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.


ಬಪ್ಪಿ ಲಹರಿ ಅವರು ಎದೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಚಿಕಿತ್ಸೆ ನೀಡಲಾಗಿದ್ದು ಗುಣಮುಖರಾಗಿದ್ದರು, ಆದರೆ ಮತ್ತೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆ ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ.

‘ಬಪ್ಪಿ ದಾ’ ಎಂದೇ ಚಿತ್ರೋದ್ಯಮದಲ್ಲಿ ಜನಪ್ರಿಯರಾಗಿದ್ದ ಇವರು 1970 ಹಾಗೂ 80ರ ದಶಕದ ಅನೇಕ ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದರು. ಡಿಸ್ಕೊ ಪ್ರಕಾರದ ನೃತ್ಯ ಸಂಗೀತವನ್ನು ಭಾರತಕ್ಕೆ ಪರಿಚಯಿಸಿದ ಗಾಯಕರಲ್ಲಿ ಬಪ್ಪಿ ಲಹಿರಿ ಕೂಡ ಒಬ್ಬರು. ಹೀಗಾಗಿಯೇ ಅವರು ‘ಡಿಸ್ಕೊ ಕಿಂಗ್’ ಎಂಬ ಖ್ಯಾತಿಗೂ ಪಾತ್ರರಾಗಿದ್ದರು. ಬಪ್ಪಿ ಲಹಿರಿ ನಿಧನಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಗಣ್ಯರಿಂದ ಸಂತಾಪ ಸೂಚಿಸಿದ್ದಾರೆ.

Advertisement
Click to comment

You must be logged in to post a comment Login

Leave a Reply