Connect with us

    LATEST NEWS

    ಡೆಂಗ್ಯೂ ಹಾವಳಿ – ಜಡ್ಕಲ್ ಗ್ರಾಮಪಂಚಾಯತ್ ವ್ಯಾಪ್ತಿಯ ಶಾಲೆಗಳಿಗೆ ರಜೆ

    ಉಡುಪಿ ಮೇ 19: ಕರಾವಳಿಯಲ್ಲಿ ಮಳೆಗಾಲದ ಜೊತೆಗೆ ಡೆಂಗ್ಯೂ ಪ್ರಕರಣಗಳು ಏರಿಕೆ ಕಂಡಿದ್ದು, ಇದೀಗ ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಈ ಹಿನ್ನಲೆ ಕೊಲ್ಲೂರು ಸಮೀಪದ ಜಡ್ಕಲ್ ಗ್ರಾಮಪಂಚಾಯತ್ ವ್ಯಾಪ್ತಿಯ ಶಾಲೆಗಳಿಗೆ ಮುಂಜಾಗ್ರತ ಕ್ರಮವಾಗಿ ಮೇ 19ರಿಂದ ಮುಂದಿನ 10 ದಿನಗಳ ಕಾಲ ರಜೆ ಘೋಷಿಸಲಾಗಿದೆ.


    ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಜಿಲ್ಲಾಧಿಕಾರಿ ಕೂರ್ಮಾ ರಾವ್ ಜತೆಗೆ ಡೆಂಘಿ ಸಾಧಕ-ಬಾಧಕಗಳನ್ನು ಚರ್ಚಿಸಿದ ಬಳಿಕ ಜಿಲ್ಲಾಧಿಕಾರಿಗಳು 10 ದಿನಗಳ ರಜೆ ಘೋಷಿಸಿದ್ದಾರೆ ಎಂದು ಬೈಂದೂರು ಬಿಇಒ ಮಾಹಿತಿ ನೀಡಿದ್ದಾರೆ. ಶಾಲಾ ಪರಿಸರ ಸಹಿತ ಪ್ರತೀ ಮನೆಗಳ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. 30 ಮೀ. ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡಬೇಕು. ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಶಾಸಕ ಸುಕುಮಾರ ಶೆಟ್ಟಿ ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply