DAKSHINA KANNADA
ಜಿಲ್ಲೆಯಲ್ಲಿ ನಡೆಯುತ್ತಿರುವ ವಿಧ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಮತ್ತೊಂದು ಬಲಿ

ಜಿಲ್ಲೆಯಲ್ಲಿ ನಡೆಯುತ್ತಿರುವ ವಿಧ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಮತ್ತೊಂದು ಬಲಿ
ಸುಳ್ಯ ಸೆಪ್ಟೆಂಬರ್ 27: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ವಿಧ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಈ ಸಾಲಿಗೆ ಈಗ ಮತ್ತೊಂದು ವಿಧ್ಯಾರ್ಥಿನಿ ಈಗ ಸೇರ್ಪಡೆಯಾಗಿದೆ.
ಡೆಂಟಲ್ ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ.
ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ನೇಹಾ ಥಾಮಸ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ.

ಕೇರಳ ಮೂಲದ ನೇಹಾ ಅವರು ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂ.ಡಿ.ಎಸ್ ವಿದ್ಯಾರ್ಥಿನಿಯಾಗಿದ್ದು ಸುಳ್ಯ ನಗರದ ಬಾಡಿಗೆ ಕೊಠಡಿಯಲ್ಲಿ ವಾಸ್ತವ್ಯ ಮಾಡಿಕೊಂಡಿದ್ದಳು. ಅದೇ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮ ಹತ್ಯೆಗೆ ನಿಕರ ಕಾರಣಗಳು ತಿಳಿದಿಲ್ಲ. ಸುಳ್ಯ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ತಿಂಗಳಿನಿಂದ ವಿಧ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿಯಾಗಿದೆ. ಈಗಾಗಲೇ 4 ವಿಧ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಾಲಿಗೆ ಮತ್ತೊಂದು ಸೇರ್ಪಡೆಯಾಗಿದೆ.