LATEST NEWS
ಮಂಗಳೂರು – ವಾಯುಭಾರ ಕುಸಿತ ಹಿನ್ನಲೆ ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಡಳಿತದಿಂದ ಸೂಚನೆ

ಮಂಗಳೂರು ಮೇ 19 : ಮುಂಗಾರು ಪೂರ್ವ ಮಳೆ ಅಬ್ಬರದ ನಡುವೆ ಇದೀಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು ಮೇ 22 ರವರೆಗೆ ಮೀನುಗಾರಿಕೆಗೆ ತೆರಳದಂತೆ ಭಾರತೀಯ ಹವಾಮಾನ ಇಲಾಖೆ ಮುುನ್ಸೂಚನೆ ನೀಡಿದೆ.
ಇದೇ 20ರಂದು ಮತ್ತು ಇದೇ 22ರಂದು ಕರಾವಳಿಯಲ್ಲಿ ಪ್ರತಿಕೂಲ ಹವಾಮಾನ ಇರಲಿದ್ದು, ಗಂಟೆಗೆ 45 ಕಿ.ಮೀ ಯಿಂದ 55 ಕಿ.ಮಿ ವೇಗದಲ್ಲಿ ಗಾಳಿ ಬೀಸಲಿದೆ. ಗಾಳಿಯು ಗಂಟೆಗೆ 65 ಕಿ.ಮೀ. ವೇಗದಲ್ಲಿ ಕರಾವಳಿ ತೀರಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾಗಿ ಮೀನುಗಾರರು ಈ ಅವಧಿಯಲ್ಲಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚಿಸಿದೆ. ಈಗಾಗಲೇ ಸಮುದ್ರಕ್ಕೆ ತೆರಳಿರುವ ಮೀನುಗಾರಿಕಾ ದೋಣಿಗಳು ತಕ್ಷಣ ದಡಕ್ಕೆ ಮರಳಬೇಕು ಎಂದು ಜಿಲ್ಲಾಧಿಕಾರಿ ಕಚೇರಿಯ ಪ್ರಕಟಣೆ ತಿಳಿಸಿದೆ.
