LATEST NEWS
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಕರಾವಳಿಯಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ
ಬೆಂಗಳೂರು ಅಗಸ್ಟ್ 14 : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ದೇಶದ ಅನೇಕ ರಾಜ್ಯಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಹೆಚ್ಚಳವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ನಾಳೆ ಬೆಳಗ್ಗಿನವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ.
ಕರ್ನಾಟಕದ ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಮಳೆ ಅಧಿಕಗೊಳ್ಳಲಿದೆ ಎನ್ನಲಾಗಿದೆ. ಮಧ್ಯಪ್ರದೇಶ, ಒಡಿಶಾ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಗುಜರಾತ್, ದೆಹಲಿಯಲ್ಲೂ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Facebook Comments
You may like
5ತಿಂಗಳ ಮಗುವಿನೊಂದಿಗೆ ಬೆತ್ತಲಾಗಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ!?
ಕರಾವಳಿಯಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ
ಬ್ರಹ್ಮಾವರ – ಸಿಡಿಲಿನ ಅಬ್ಬರಕ್ಕೆ ಹೊಟೇಲ್ ಸುಟ್ಟು ಭಸ್ಮ
ಕರಾವಳಿಯಲ್ಲಿ ಮೂರು ದಿನ ಭಾರೀ ಮಳೆ ಸಾದ್ಯತೆ
ಮಳೆ ಇಲ್ಲದ ದಿನಗಳಲ್ಲಿ ಆಗುಂಬೆ ಘಾಟ್ ನಲ್ಲಿ ಘನ ವಾಹನ ಸಂಚಾರಕ್ಕೆ ಅವಕಾಶ
ಮಂಗಳೂರಿನಲ್ಲಿ ಸಂಜೆ ಸುರಿದ ಗುಡುಗು ಸಿಡಿಲು ಸಹಿತ ಭಾರೀ ಮಳೆ
You must be logged in to post a comment Login