ಸುಳ್ಯ ಜನವರಿ 07: ಸುಳ್ಯ ಶಾಸಕ ಭಾಗೀರಥಿ ಮುರುಳ್ಯ ಅವರ ಪೋಟೋವನ್ನು ಬಳಸಿ ಶೃದ್ದಾಂಜಲಿ ಎಂಬ ಪೋಸ್ಟ್ ಹಾಕಲಾಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಬಿಲ್ಲವ ಸಂದೇಶ್ (Billava Sandesh) ಎಂಬ ಫೇಸ್ಬುಕ್ ಖಾತೆಯಿಂದ ಪೋಸ್ಟ್ ಮಾಡಲಾಗಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಭಾವಚಿತ್ರ ಬಳಸಿ ಅವರನ್ನು ನಿಂಧಿಸಿ, ಅವಹೇಳನ ಮಾಡುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕವಾಗಿ ಖಂಡನೆ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್ ನಲ್ಲಿ ” ದಲಿತ ಸಮುದಾಯದ ಶಾಸಕಿ ಭಾಗೀರಥಿ ಮುರುಳ್ಯಾ ಶೋಷಣೆಗೊಳಗಾದ ದಲಿತ ಸಮುದಾಯದ ಪರ ನಿಲ್ಲದೆ ಇಂದು ಎಲ್ಲರನ್ನು ಅಗಲಿ ತೆರಳಿದ್ದಾರೆ. ಇವರ ಅಗಲಿಕೆಯ ಶಕ್ತಿ ಬ್ಲೂಜೇಪಿ ಪಕ್ಷದ ಕಾರ್ಯಕರ್ತರಿಗೆ ದೇವರು ನೀಡಲಿ ಎಂದು ಹೇಳುತ್ತಾ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುತ್ತಿದ್ದೇವೆ ಅಂತ ಪೋಸ್ಟ್ ಹಾಕಲಾಗಿದೆ. ”

ಸದ್ಯ ಪೋಸ್ಟ್ ವೈರಲ್ ಆಗಿದ್ದು, ಬಿಲ್ಲವ ಸಂದೇಶ್ ನನ್ನು ಅರೆಸ್ಟ್ ಮಾಡಬೇಕೆಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಬಿಜೆಪಿ ಮಹಿಳಾ‌ ಮೋರ್ಚಾದಿಂದ ಸುಳ್ಯ ಪೋಲೀಸ್ ಠಾಣೆಗೆ‌ ದೂರು ನೀಡಿದ್ದು, ಪೋಸ್ಟ್ ಹಾಕಿದ ಆರೋಪಿಯನ್ನು ಬಂಧಿಸುವಂತೆ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗೆ ಸುಳ್ಯ ಬಿಜೆಪಿ ಮುಖಂಡರು ಮನವಿ ಮಾಡಿದ್ದಾರೆ.

ಈ ಕುರಿತಂತೆ ಶಾಸಕ ವೇದವ್ಯಾಸ್ ಕಾಮತ್ ಅಕ್ರೋಶ ವ್ಯಕ್ತಪಡಿಸಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಸಹೋದರಿ Bhagirathi Murulya Bjp ರವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ದುಷ್ಟನೋರ್ವ ಅವಮಾನಕಾರಿ ಬರಹದ ಮೂಲಕ ವಿಕೃತಿ ಮೆರೆದಿರುವುದು ಖಂಡನೀಯ.

ಅಸಭ್ಯ ಭಾಷೆಗಳ ಮೂಲಕ ಬೆದರಿಕೆ ಹಾಕುವ ಇಂತಹ ದುರುಳರು ನಾಗರೀಕ ಸಮಾಜಕ್ಕೆ ಬಹುದೊಡ್ಡ ಕಳಂಕ. ಇದು ಕೇವಲ ಒಬ್ಬ ದಲಿತ ಸಮುದಾಯದ ಸಹೋದರಿಗೆ ಮಾಡಿದ ಅವಮಾನವಲ್ಲ, ಬದಲಿಗೆ ಈ ದೇಶದ ಮಹಿಳೆಯೊಬ್ಬರ ಘನತೆ ಹಾಗೂ ಗೌರವದ ಮೇಲಿನ ನೇರ ದಾಳಿಯಾಗಿದೆ.

ಇಂತಹ ಅನಾಗರಿಕ ವರ್ತನೆಯನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲವಾಗಿದ್ದು ಈ ಕೂಡಲೇ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯ ಹೆಡೆಮುರಿ ಕಟ್ಟಬೇಕೆಂದು ಆಗ್ರಹಿಸಿದ್ದಾರೆ.

Share Information