LATEST NEWS
ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ನಿಂದನಾತ್ಮಕ ಪೋಸ್ಟ್
ಉಡುಪಿ ಜನವರಿ 21: ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ವಿರುದ್ಧ ಫೇಸ್ಬುಕ್ನಲ್ಲಿ ಅವಾಚ್ಯ ಶಬ್ದಗಳನ್ನು ಬಳಸಿ ನಿಂದನಾತ್ಮಕ ಪೋಸ್ಟ್ ಮಾಡಿದ್ದ ಯುವಕನ ವಿರುದ್ಧ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪೆರ್ಡೂರಿನ ಅನಿಲ್ ಕುಮಾರ್ ಶೆಟ್ಟಿ ಎಂಬಾತನೇ ಸಚಿವರ ವಿರುದ್ಧ ನಿಂದನಾತ್ಮಕ ಪೋಸ್ಟ್ ಮಾಡಿದ ಆರೋಪಿಯಾಗಿದ್ದು. ಬಿಲ್ಲವ ಈಡಿಗ ಉಪಪಂಗಡಗಳ ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ 50 ಕೋಟಿ ರೂಗಳನ್ನು ಬಜೆಟ್ ನಲ್ಲಿ ಮೀಸಲಿಡುವಂತೆ ಕೋರಿ ಸಚಿವ ಶ್ರೀನಿವಾಸ್ ಪೂಜಾರಿ ಅವರು ಇತ್ತೀಚೆಗೆ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದರು.
ಈ ಮನವಿ ಚಿತ್ರ ಬಳಸಿಕೊಂಡು ರಾಜಕೀಯ ರೀತಿಯಲ್ಲಿ ಅನಿಲ್ ಕುಮಾರ್ ಶೆಟ್ಟಿ ಅವಾಚ್ಯ ಶಬ್ದಗಳನ್ನು ಬಳಸಿ ಫೇಸ್ ನುಕ್ ನಲ್ಲಿ ಪೋಸ್ಟ್ ಮಾಡಿದ್ದಾನೆ. ಈ ಕುರಿತು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದನ್ನು ಗಮನಿಸಿದ ಆರೋಪಿಯು ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾನೆ. ಕೋಟ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.