LATEST NEWS
ಸಿದ್ದರಾಮಯ್ಯನ ಕೊಂದ್ರೆ ಹಿಂದೂಗಳಿಗೆ ನೆಮ್ಮದಿ: ಪೋಸ್ಟ್ ಹಾಕಿದ್ದ ಕಾರ್ಕಳದ ಸಂಪತ್ ಸಾಲಿಯಾನ್ ಅರೆಸ್ಟ್

ಉಡುಪಿ ಮೇ 05: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟ್ ಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಇದೀಗ ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಕಾಮೆಂಟ್ ಹಾಕಿದ್ದ ಉಡುಪಿಯ ಕಾರ್ಕಳದ ಹೋಂ ಗಾರ್ಡ್ ಸಂಪತ್ ಸಾಲಿಯಾನ್ ಬಂಧನವಾಗಿದೆ.
ಬೆಂಗಳೂರಿನ ಹೋಂ ಗಾರ್ಡ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಂಪತ್ ಸಾಲಿಯಾನ್ ಎನ್ನುವಾತ ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಸಂಪತ್ ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಹಾಕಿದ್ದಾನೆ. ಈ ಸಂಬಂಧ ಸದ್ಯ ಕಾರ್ಕಳ ಪೊಲೀಸರು ಹೋಂ ಗಾರ್ಡ್ ಸಂಪತ್‌ನನ್ನು ಬಂಧಿಸಿದ್ದಾರೆ.

ಮೇ 2ರಂದು ಈತ ತನ್ನ ಇನ್ನಾಗ್ರಾಂ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು ಈ ಕುರಿತು ಕಾರ್ಕಳದ ಸೂರಜ್ ಶೆಟ್ಟಿ ನಕ್ರೆ ಎಂಬವರು ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ರಾಜಕೀಯ ಪಕ್ಷದ ಮುಖಂಡರ ಹಾಗೂ ಹಿಂದುಗಳಿಗೆ ನೆಮ್ಮದಿ ಎಂದು ಪ್ರಚೋದಿಸಿ ವೈರತ್ನವನ್ನು ಬೆಳೆಸಿ ದ್ವೇಷ ಭಾವನೆ ಹರಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುತ್ತಾನೆ ಎಂದು ಸೂರಜ್ ದೂರಿನಲ್ಲಿ ತಿಳಿಸಿದ್ದರು. ಬೆಂಗಳೂರಿನಲ್ಲಿ ಹೋಂ ಗಾರ್ಡ್ ಕೆಲಸ ನಿರ್ವಹಿಸುತ್ತಿದ್ದ ಸಂಪತ್‌ನನ್ನು ಮೇ 4ರಂದು ಕಾರ್ಕಳ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿರುತ್ತಾರೆ.