Connect with us

    DAKSHINA KANNADA

    ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ, ಬಿಜೆಪಿ ಶಾಸಕ ಭರತ್ ಶೆಟ್ಟಿಯನ್ನು ಬಂಧಿಸುವಂತೆ ಪೊಲೀಸ್ ಆಯುಕ್ತರಿಗೆ ಕಾಂಗ್ರೆಸ್ ದೂರು..!

    ಮಂಗಳೂರು : ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರ ಹಿನ್ನಲೆ ಮಂಗಳೂರು ಬಿಜೆಪಿ ಶಾಸಕ ಡಾ. ವೈ. ಭರತ್ ಶೆಟ್ಟಿ ವಿರುದ್ಧ ಎಂಎಲ್​ಸಿ ಐವನ್ ಡಿಸೋಜಾ ನೇತೃತ್ವದ ನಿಯೋಗ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್​ಗೆ ದೂರು ನೀಡಿದ್ದು ಎಫ್ಐಆರ್‌ ದಾಖಲಿಸಿ ಭರತ್ ಶೆಟ್ಟಿಯನ್ನು ಬಂಧಿಸಲು ಒತ್ತಾಯಿಸಿದೆ.

    ಮಂಗಳೂರಿನ ಕಾವೂರಿನಲ್ಲಿ ನಿನ್ನೆ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ್ದ ಶಾಸಕ ಭರತ್ ಶೆಟ್ಟಿ, ‘ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನಿಸ್ತಿದೆ. ರಾಹುಲ್ ಗಾಂಧಿ ಶಿವನ ಫೋಟೋ ಹಿಡಿದು ನಿಂತಿದ್ದ. ಈ ಹುಚ್ಚನಿಗೆ ಶಿವ ಮೂರನೇ ಕಣ್ಣು ಬಿಟ್ಟರೆ ಸುಟ್ಟು ಬೂದಿಯಾಗ್ತಾನೆ ಎಂದು ಗೊತ್ತಿಲ್ಲ ಎಂದಿದ್ದರು. ಈ ಹಿನ್ನಲೆ ಐವನ್ ಡಿಸೋಜಾ ನೇತೃತ್ವದ ನಿಯೋಗ ಭರತ್ ಶೆಟ್ಟಿ ಅವರನ್ನು ಬಂಧಿಸಲು ಕಮಿಷನರ್​ಗೆ ದೂರು ನೀಡಿದೆ.

    Share Information
    Advertisement
    Click to comment

    You must be logged in to post a comment Login

    Leave a Reply