Connect with us

    DAKSHINA KANNADA

    ದೇವರಮನೆ ಗುಡ್ಡ ಸಾವದ್ ಕೊಲೆ ಪ್ರಕರಣ : ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು..!

    ಯುವಕನೋರ್ವನನ್ನು ಕೊಲೆ ಮಾಡಿ ಚಾರ್ಮಾಡಿ ಘಾಟ್‌ನ ದೇವರಮನೆ ಸಮೀಪ ಗುಡ್ಡದಲ್ಲಿ ಹೆಣ ಎಸೆದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಕರ್ನಾಟಕ ಉಚ್ಛ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

    ಬೆಂಗಳೂರು :  ಯುವಕನೋರ್ವನನ್ನು ಕೊಲೆ ಮಾಡಿ ಚಾರ್ಮಾಡಿ ಘಾಟ್‌ನ ದೇವರಮನೆ ಸಮೀಪ ಗುಡ್ಡದಲ್ಲಿ ಹೆಣ ಎಸೆದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಕರ್ನಾಟಕ ಉಚ್ಛ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

    ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಸೇರಿ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿತ್ತು.

    ಜೂನ್ 8 ರಂದು ದೇವರಮನೆ ಸಮೀಪ ರಸ್ತೆಯಂಚಿನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಆ ಶವ ತಮ್ಮ ಮಗನದೆಂದು ಬಂಟ್ವಾಳ ಮೂಲದ ಕುಟುಂಬ ಗುರುತಿಸಿತ್ತು.

    ಕೊಲೆಗೀಡಾದ ಸಾವದ್ ಮಾದಕವಸ್ತು ವ್ಯಸನಿಯಾಗಿದ್ದ ಮತ್ತು ಮಾದಕವಸ್ತು ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಎಂದು ತಿಳಿದು ಬಂದಿತ್ತು.

    ಗಾಂಜಾ ಮಾರಾಟ ವ್ಯವಹಾರದಲ್ಲಿ ಉಂಟಾದ ಗಲಾಟೆ ಕೊಲೆಗೆ ಕಾರಣವಾಗಿತ್ತು ಎಂದು ಪೊಲೀಸರು ಆರೋಪವನ್ನು ಮಾಡಿದ್ದರು.

    ದಕ್ಷಿಣ ಕನ್ನಡ ಜಿಲ್ಲೆಯ ಪಡುಬಿದ್ರೆಯ ಬೆಂಗ್ರೆ ಎಂಬಲ್ಲಿ ಸಾವದ್ ನನ್ನು ಕೊಲೆ ಮಾಡಿ ಬಳಿಕ ಹೆಣವನ್ನು ತಂದು ದೇವರಮನೆ ಗುಡ್ಡದಲ್ಲಿ ಎಸೆದು ಹೋಗಿದ್ದ ಬಗ್ಗೆ ಆರೋಪಿಗಳು ಹೇಳಿಕೆ ನೀಡಿದ್ದಾರೆಂದು ಪೊಲೀಸರು ಆರೋಪ ದಾಖಲಿಸಿದ್ದರು

    ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮೇಗೌಡ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಯಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

    ಇದೀಗ ಇಬ್ಬರು ಆರೋಪಿಗಳಾದ ಆಫ್ರಿದ್ ಮತ್ತು ಇರ್ಶಾದ್ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು, ಮಂಜೂರು ಮಾಡಿ ಆದೇಶ ಹೊರಡಿಸಿದೆ.

    ಆರೋಪಿಗಳ ಪರ ಲೆಕ್ಸ್ ಜೂರಿಸ್ ಲಾ ಚೇಂಬರ್ ನ ವಕೀಲರಾದ ಆಸಿಫ್ ಬೈಕಾಡಿ, ಮಹಮ್ಮದ್ ಅಸ್ಗರ್ ಮುಡಿಪು ವಾದಿಸಿದ್ದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *