Connect with us

    LATEST NEWS

    5ನೇ ವಾರ್ಡ್‌ ಕೋಡ್ದಬ್ಬು ದೈವಸ್ಥಾನ ಪರಿಸರದ ಅಭಿವೃದ್ಧಿಗೆ 1.06 ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್‌ ಅವರಿಂದ ಶಿಲಾನ್ಯಾಸ

    ಮಂಗಳೂರು ಫೆಬ್ರವರಿ 11 : ಮಹಾನಗರಪಾಲಿಕೆಯ 5ನೇ ಅತ್ತಾವರ ವಾರ್ಡ್‌ನ ಪ್ರಮುಖ 3ನೇ ಅಡ್ಡರಸ್ತೆಯಲ್ಲಿರುವ ಶ್ರೀ ಕೋಡ್ದಬ್ಬು ದೈವಸ್ಥಾನದ ಪರಿಸರದಲ್ಲಿ ಒಟ್ಟು 1 ಕೋಟಿ 06 ಲಕ್ಷ ರೂ ಮೊತ್ತದ ಮೂರು ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಾಮಗಾರಿಗಳ ವಿವರ ಮಾಹಿತಿ ನೀಡಿದರು. ಸ್ಥಳೀಯ ಕಾರ್ಪೊರೇಟರ್‌ ಶೈಲೇಶ್ ಶೆಟ್ಟಿ ಅವರ ಸಹಕಾರದೊಂದಿಗೆ ಈ ವಿಶೇಷ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

    ರಾಜ್ಯ ಸರಕಾರದ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ ಅಡಿ ಅನುದಾನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರು ನಗರದ ಅಭಿವೃದ್ಧಿಗಾಗಿ 125 ಕೋಟಿ ರೂ ಅನುದಾನ ಒದಗಿಸಿದ್ದಾರೆ. ಅದರಲ್ಲಿ 1 ಕೋಟಿ 6 ಲಕ್ಷ ರೂ.ಗಳನ್ನು ಕೋಡ್ದಬ್ಬು ದೈವಸ್ಥಾನ ಪರಿಸರದ ಅಭಿವೃದ್ಧಿಗೆ ನೀಡಲಾಗಿದೆ. ಈ ಮೊತ್ತದಲ್ಲಿ 44 ಲಕ್ಷ ರೂ ವೆಚ್ಚದಲ್ಲಿ ದೈವಸ್ಥಾನದ ಹಿಂದೆ ತಡೆಗೋಡೆ ನಿರ್ಮಾಣ, 38 ಲಕ್ಷ ರೂ ವೆಚ್ಚದಲ್ಲಿ ಅಂಬೇಡ್ಕರ್ ಸಮುದಾಯ ಭವನ ಮತ್ತು ಚರಂಡಿ ಕಾಮಗಾರಿ, 25 ಲಕ್ಷ, ರೂ ವೆಚ್ಚದಲ್ಲಿ ಇಂಟರ್‌ಲಾಕ್ ಅಳವಡಿಕೆ- ನಡೆಸಲಾಗುತ್ತದೆ ಎಂದು ಶಾಸಕರು ವಿವರಿಸಿದರು.

    ದಲಿತರು, ಪರಿಶಿಷ್ಟ ಜಾತಿ, ಪಂಗಡಗಳ ಜನರ ಅಭಿವೃದ್ಧಿಗಾಗಿ ಸರಕಾರ ಗರಿಷ್ಠ ಆದ್ಯತೆ ನೀಡಿದ್ದು, ಈ ಸಮಾಜದ ಅಭಿವೃದ್ಧಿಗೆ ಅನುದಾನದ ಬಳಕೆ ಮಾಡಲಾಗುತ್ತದೆ. ಆ ಮೂಲಕ ಪರಿಶಿಷ್ಟ ಜಾತಿ, ಪಂಗಡಕ್ಕೆ ನ್ಯಾಯ ಕೊಡುವ ಕೆಲಸ ಮಾಡಲಾಗುತ್ತಿದೆ ಎಂದು ಶಾಸಕ ಕಾಮತ್‌ ಹೇಳಿದರು.

     

    Share Information
    Advertisement
    Click to comment

    You must be logged in to post a comment Login

    Leave a Reply