ಮಂಗಳೂರು ಜನವರಿ 18: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 32ನೇ ಕದ್ರಿ ಉತ್ತರ ವಾರ್ಡಿನ ಈಡನ್ ಕ್ಲಬ್ ಬಳಿ ಸುಮಾರು 30 ಲಕ್ಷ ರೂ. ವಿಶೇಷ ಅನುದಾನದಲ್ಲಿ ಮುಂದುವರಿದ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಅದರ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು.

ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಬೇಡಿಕೆಯಂತೆ ಈ ಕಾಮಗಾರಿಗೆ ಅನುದಾನವನ್ನು ಹೊಂದಿಸಿಕೊಳ್ಳಲಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಮುಗಿದು ಎಲ್ಲರ ಉಪಯೋಗಕ್ಕೆ ಬಳಕೆಯಾದರೆ ಸಂತೋಷವೆಂದರು.