ಉಡುಪಿ / ಸಾಲಿಗ್ರಾಮ ಜನವರಿ 07: ಬ್ರಹ್ಮಾವರ ತಾಲೂಕಿ ಸಾಲಿಗ್ರಾಮದಲ್ಲಿ ಜನರಿಗೆ ಚಿರಪರಿಚಿತವಾಗಿರುವ ಡಿವೈನ್ ಪಾರ್ಕ್ ಸ್ಥಾಪಿಸಿದ್ದ ಸ್ಥಾಪಿಸಿದ್ದ ಡಾ.ಎ.ಚಂದ್ರಶೇಖರ್ ಉಡುಪ (75) ಹೃದಯಾಘಾತದಿಂದ ಜನವರಿ 7ರಂದು ಬೆಳಗಿನ ಜಾವ ನಿಧನರಾದರು.

ಡಾ.ಎ.ಚಂದ್ರಶೇಖರ್ ಉಡುಪ ಅವರು ಸ್ವಾಮಿ ವಿವೇಕಾನಂದರ ಚಿಂತನೆಗಳ ಪ್ರಸಾರಕ್ಕಾಗಿ ಸಾಲಿಗ್ರಾಮದಲ್ಲಿ ಡಿವೈನ್ ಪಾರ್ಕ್ ಸ್ಥಾಪಿಸಿದ್ದರು. ಡಿವೈನ್ ಪಾರ್ಕ್ ಮೂಲಕ ಹಲವು ಸೇವಾ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದ್ದ ಇವರು ವೃತ್ತಿಯಲ್ಲಿ ವೈದ್ಯರಾಗಿದ್ದರು. ವೈದ್ಯಕೀಯ ವ್ಯಾಸಂಗ ಮಾಡುತ್ತಿರುವಾಗ ವಿವೇಕಾನಂದರ ಚಿಂತನೆಗಳ ಪ್ರಭಾವಕ್ಕೆ ಒಳಗಾಗಿ ಅನಂತರ ಡಿವೈನ್ ಪಾರ್ಕ್ ಎಂಬ ಸಂಸ್ಥೆಯನ್ನು ಆರೋಗ್ಯ ಮತ್ತು ಅಧ್ಯಾತ್ಮದ ನೆಲೆಯಲ್ಲಿ ಪ್ರಾರಂಭಿಸಿದ್ದರು. ಇವರಿಗೆ ದೇಶ-ವಿದೇಶಗಳಲ್ಲಿ ಲಕ್ಷಾಂತರ ಮಂದಿ ಅನುಯಾಯಿಗಳಿದ್ದಾರೆ.
ಡಿವೈನ್ ಪಾರ್ಕ್ ನ ಸಹಸಂಸ್ಥೆಯಾಗಿ ಎಸ್ಎಚ್ಆರ್ಎಫ್ (ಯೋಗಬನ) ಸ್ಥಾಪಿಸಿದ ಇವರು ಯೋಗ, ಪ್ರಕೃತಿ, ಆಯುರ್ವೇದಗಳ ಜತೆಗೆ ಆಧ್ಯಾತ್ಮಿಕ ಚಿಕಿತ್ಸಕ ಕ್ರಮವನ್ನೂ ಮುನ್ನೆಲೆಗೆ ತಂದಿದ್ದರು.



