Connect with us

KARNATAKA

ಗಣಪತಿ ವಿಸರ್ಜನೆ ವೇಳೆ ಮುಸ್ಲಿಂ ವ್ಯಕ್ತಿಯ ಪಾರ್ಥೀವ ಶರೀರದ ಮೆರವಣಿಗೆ ಕಂಡು ಡಿಜೆ ಬಂದ್ ಮಾಡಿದ ಗಣೇಶ ಭಕ್ತರು

ಹಾವೇರಿ, ಸೆಪ್ಟೆಂಬರ್ 05: ಗಣಪತಿ ವಿಸರ್ಜನೆ ವೇಳೆ ಮುಸ್ಲಿಂ ವ್ಯಕ್ತಿಯ ಪಾರ್ಥೀವ ಶರೀರದ ಮೆರವಣಿಗೆ ಕಂಡು ಡಿಜೆ ಬಂದ್ ಮಾಡಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದಲ್ಲಿ ನಡೆದಿದೆ.

ಹಿಂದೂ-ಮುಸ್ಲಿಮರ ಸೌಹಾರ್ದ ಮನೋಭಾವಕ್ಕೆ ಸಾಕ್ಷಿಯಾಗಿದೆ. ಗಜಾನನ ಯುವಕ ಮಂಡಳಿಯ ಸದಸ್ಯರು ಇಲ್ಲಿನ ಉಮಾಶಂಕರ ನಗರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದರು. ಗಣೇಶ ವಿಸರ್ಜನೆಯ ಮೆರವಣಿಗೆ ಎಂಜಿ ರಸ್ತೆಗೆ ಬಂದಾಗ ಅದೇ ಮಾರ್ಗದಲ್ಲಿ ಮುಸ್ಲಿಂ ವ್ಯಕ್ತಿಯ ಪಾರ್ಥೀವ ಶರೀರವನ್ನು ಕಬರಸ್ತಾನ ಕಡೆಗೆ ಹೊತ್ತೊಯ್ಯುತ್ತಿದ್ದರು.

ಒಟ್ಟಿನಲ್ಲಿ ಈ ಘಟನೆ ಹಿಂದೂ-ಮುಸ್ಲಿಮರ ಆತ್ಮೀಯತೆಗೆ ಸಾಕ್ಷಿಯಾಗಿದ್ದು, ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

Advertisement
Click to comment

You must be logged in to post a comment Login

Leave a Reply