Connect with us

    DAKSHINA KANNADA

    ಮಂಗಳೂರು : ಶಂಕಿತ ನಕ್ಸಲರು, ಸಾಮಾಜ ಘಾತುಕ ಶಕ್ತಿಗಳ ಮೇಲೆ ನಿಗಾ ಇಡಲು ಡಿಜಿಪಿ ಅಲೋಕ್ ಮೋಹನ್ ಸೂಚನೆ

    ಮಂಗಳೂರು : ಶಂಕಿತ ನಕ್ಸಲರು, ಸಾಮಾಜ ಘಾತುಕ ಶಕ್ತಿಗಳ ಮೇಲೆ ನಿಗಾ ಇಡಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

    ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಮಂಗಳೂರಿಗೆ ಆಗಮಿಸಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.  ಚುನಾವಣೆ ಸಂದರ್ಭದಲ್ಲಿ ಪೊಲೀಸ್ ಇಲಾಖೆ  ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಮತ್ತು ಭದ್ರತಾ ಕಾರ್ಯಗಳ ಬಗ್ಗೆ ಡಿಜಿಪಿ ಅವರು ಸೂಕ್ತ ನಿರ್ದೇಶನ ನೀಡಿದರು. ನಕ್ಸಲ್ ಪ್ರದೇಶಗಳ ವ್ಯಾಪ್ತಿಯಲ್ಲಿ  ಶಂಕಿತ ನಕ್ಸಲರು, ಇತರ ಸಾಮಾಜ ಘಾತುಕ ಶಕ್ತಿಗಳ ಮೇಲೂ ನಿಗಾ ಇಡಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

    ಚುನಾವಣೆ ಸಂದರ್ಭ ಕಟ್ಟುನಿಟ್ಟಿನ ಕಾನೂನು ಪಾಲನೆ ಮತ್ತು ಯಾವುದೇ ಲೋಪಗಳು ಸಂಭವಿಸದಂತೆ ಎಚ್ಚರ ವಹಿಸಲು ಸೂಚಿಸಿದರು.  ಮಂಗಳೂರಿನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಪಶ್ಚಿಮ ವಲಯದ ಹಿರಿಯ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು. ಮಂಗಳೂರು ನಗರ ಪೊಲೀಸ್ ಆಯುಕ್ತ  ಅನುಪಮ್ ಅಗ್ರವಾಲ್, ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಿಷ್ಯಂತ್ ಸಿಬಿ, ಉಡುಪಿ ಎಸ್‌ಪಿ ಡಾ. ಅರುಣ್, ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply