KARNATAKA
ಧಾರವಾಡ ಭೀಕರ ರಸ್ತೆ ಅಪಘಾತಕ್ಕೆ 11 ಮಂದಿ ಸಾವು
ದಾರವಾಡ ಜನವರಿ 15: ಟೆಂಪೋ ಟ್ರಾವೆಲರ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲಿಯೇ 11 ಮಂದಿ ಸಾವನ್ನಪ್ಪಿರುವ ಘಟನೆ ಧಾರವಾಡ ಹೊರವಲಯದ ಇಟಿಗಟ್ಡಿ ಗ್ರಾಮದ ಬೈಪಾಸ್ ನಲ್ಲಿ ನಡೆದಿದೆ. ಮೃತರಲ್ಲಿ 10 ಮಂದಿ ಮಹಿಳೆಯರು ಸೇರಿದಂತೆ ಓರ್ವ ಟಿಪ್ಪರ್ ಚಾಲಕ ಸೇರಿದ್ದಾರೆ.
ಮೃತ ಪಟ್ಟವರೆಲ್ಲ ದಾವಣಗೆರೆ ಮೂಲದವರು ಎಂದು ಹೇಳಲಾಗಿದ್ದು, ದಾವಣಗೆರೆಯಿಂದ ಪಣಜಿಗೆ ಹೋಗುತಿದ್ದ ಟೆಂಪೋ ಟ್ರಾವೆಲರ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿದೆ. ಎರಡು ವಾಹನಗಳು ಪರಸ್ಪರ ಡಿಕ್ಕಿಯಾದ ಪರಿಣಾಮ ವಾಹನದಲ್ಲಿದ್ದ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ದಾವಣಗೆರೆಯ ಲೇಡಿಸ್ ಕ್ಲಬ್ ಸದಸ್ಯರಾದ ಇವರು ಟೆಂಪೋ ಟ್ರಾವೆಲರ್ ನಲ್ಲಿ ಗೋವಾಕ್ಕೆ ಹೋಗುತ್ತಿದ್ದರು ಈ ವೇಳೆ ಅಪಘಾತ ಸಂಭವಿಸಿದೆ. ವಾಹನದಲ್ಲಿ ಇನ್ನು ಹಲವು ಶವಗಳು ಸಿಲುಕಿಕೊಂಡಿವೆ ಅವುಗಳನ್ನು ತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.