Connect with us

  LATEST NEWS

  ಮತ್ತೆ ಧರ್ಮದಂಗಲ್ – ಕುಡುಪು ಷಷ್ಟಿ ಮಹೋತ್ಸವದ ಜಾತ್ರೆ ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಣೆ

  ಮಂಗಳೂರು ಡಿಸೆಂಬರ್ 07: ಕರಾವಳಿಯಲ್ಲಿ ಮತ್ತೆ ಧರ್ಮದಂಗಲ್ ಶುರುವಾಗಿದ್ದು, ಜಾತ್ರಾಮಹೋತ್ಸವಗಳು ಪ್ರಾರಂಭವಾಗುವ ವೇಳೆ ಇದೀಗ ಮತ್ತೆ ಈ ವಿವಾದ ಉಂಟಾಗಿದ್ದು ಡಿಸೆಂಬರ್ 14ರಿಂದ 19ವರೆಗೆ ನಡೆಯಲಿರುವ ಕುಡುಪು ಷಷ್ಠಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.


  ಈ ಮಧ್ಯೆ ವ್ಯಾಪಾರಿಗಳು ಡಿವೈಎಫ್‌ಐ ನೇತೃತ್ವದಲ್ಲಿ ದ.ಕ.ಜಿಲ್ಲಾಡಳಿಕ್ಕೆ ಗುರುವಾರ ದೂರು ನೀಡಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.


  ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಈ ದೇವಸ್ಥಾನದ ಪ್ರಾಂಗಣದ ಹೊರಗಡೆ ನಡೆಯುವ ಸಂತೆ ವ್ಯಾಪಾರದಲ್ಲಿ ಧಾರ್ಮಿಕ ತಾರತಮ್ಯ ನಡೆಯುತ್ತಿರುವುದು ಖಂಡನೀಯ. ಜಾತ್ರೆಗಳನ್ನೇ ನಂಬಿ ಬದುಕುವ ಬಡ ಸಂತೆ ವ್ಯಾಪಾರಿಗಳ ಬದುಕುವ ಹಕ್ಕನ್ನು ರಕ್ಷಿಸಲು ಜಿಲ್ಲಾಡಳಿತ ಮತ್ತೆ ವಿಫಲವಾಗಿದೆ. ಈ ಹಿಂದೆ ಮಂಗಳಾದೇವಿ ದೇವಸ್ಥಾನದ ಜಾತ್ರೆಯ ಸಂದರ್ಭ ವಿವಾದ ಉಂಟಾದ ಬಳಿಕವೂ ಜಿಲ್ಲಾಡಳಿತ ಸೂಕ್ತ ನಿರ್ಧಾರ ತಾಳದ ಕಾರಣ ಇಂತಹ ತಾರತಮ್ಯ ನೀತಿ ಮುಂದುವರಿಯುತ್ತಿದೆ. ಇದಕ್ಕೆ ಜಿಲ್ಲಾಡಳಿತವೇ ಹೊಣೆ ಎಂದು ಬಿ.ಕೆ. ಇಮ್ತಿಯಾಝ್ ಆರೋಪಿಸಿದ್ದಾರೆ.

   

  Share Information
  Advertisement
  Click to comment

  You must be logged in to post a comment Login

  Leave a Reply