Connect with us

    LATEST NEWS

    ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿರುದ್ದ ಆಕ್ರೋಶ

    ಮಂಗಳೂರು ಜನವರಿ 22: ಕರಾವಳಿಯಲ್ಲಿ ನಡೆಯುತ್ತಿರುವ ಧರ್ಮದಂಗಲ್ ವಿರುದ್ದ ಇದೀಗ ಆಕ್ರೋಶ ವ್ಯಕ್ತವಾಗಿದ್ದು, ದೇವಸ್ಥಾನಗಳ ಜಾತ್ರೆ ಸಂದರ್ಭ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹಾಕಿರುವ ಬ್ಯಾನರ್ ಗಳನ್ನು ಹಾಕಿ ಸಮಾಜದಲ್ಲಿ ಅಶಾಂತಿ ಸ್ರಷ್ಟಿಸಲು ಪ್ರಯತ್ನಿಸಲಾಗುತ್ತಿದೆ. ಈ ರೀತಿಯ ಕೋಮು ವಿಭಜಕ ಕೃತ್ಯಗಳಿಂದ ಬಡ ಸಂತೆ ವ್ಯಾಪಾರಿಗಳ ಜೀವನ ನಿರ್ವಹಣೆಗೆ ತೊಂದರೆ ಆಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘ ಆರೋಪಿಸಿದೆ.


    ಮುಸ್ಲಿಂ ವ್ಯಾಪಾರಿಗಳಿಗೆ ಜಾತ್ರೆ ಸಂದರ್ಭ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಬ್ಯಾನರ್ ಕಟ್ಟಿ ಕಟ್ಟಿ ಅಶಾಂತಿ ಸೃಷ್ಟಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಸಂತೆ ವ್ಯಾಪಾರಿಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಕೋಮು ಸಾಮರಸ್ಯವನ್ನು ಕಾಪಾಡಬೇಕು ಎಂದು ಒತ್ತಾಯಿಸಿ ಬಿ.ಕೆ.ಇಮ್ತಿಯಾಜ್ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳ ನಿಯೋಗವು ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ನಗರ ಪೊಲೀಸ್ ಕಮಿಷನರ್‌ ಎನ್‌.ಶಶಿಕುಮಾರ್‌, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್‌ ಶ್ರಿಧರ್‌ ಹಾಗೂ ತಹಶೀಲ್ದಾರ್ ಅವರಿಗೆ ಶನಿವಾರ ಮನವಿ ಸಲ್ಲಿಸಿತು.

    ಸಂತೆ ವ್ಯಾಪಾರಿಗಳಿಗೆ ಧರ್ಮದ ಹೆಸರಿನಲ್ಲಿ ಕಿರುಕುಳ ಕೊಟ್ಟಲ್ಲಿ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ತಿಳಿಸಿದರು.

     

    Share Information
    Advertisement
    Click to comment

    You must be logged in to post a comment Login

    Leave a Reply