Connect with us

    BELTHANGADI

    ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಇಬ್ಬರು ಮಹಿಳೆಯರ ಮೃತದೇಹ ಪತ್ತೆ

    ಬೆಳ್ತಂಗಡಿ ಫೆಬ್ರವರಿ 5 : ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಕಿಂಡಿ ಅಣೆಕಟ್ಟಿನ ಬಳಿ ಇಬ್ಬರು ಅಪರಿಚಿತ ಮಹಿಳೆಯರ ಮೃತದೇಹ ಪತ್ತೆಯಾಗಿದೆ.


    ಮೃತ ಇಬ್ಬರು ಮಹಿಳೆಯರು ಸುಮಾರು 45 ಮತ್ತು 25 ವರ್ಷ ಪ್ರಾಯದವರು ಎಂದು ಅಂದಾಜಿಸಲಾಗಿದೆ. ನೇತ್ರಾವತಿ ನದಿಯಲ್ಲಿ ತೀರ್ಥ ಸ್ನಾನಕ್ಕೆ ಆಗಮಿಸಿದ್ದ ಯಾತಾರ್ಥಿಗಳು ಶವಗಳನ್ನು ನೋಡಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಶವಗಳ ಬಳಿ ಯಾವುದೇ ಗುರುತಿನ ವಿವರಗಳು ಪತ್ತೆಯಾಗಿಲ್ಲ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply