LATEST NEWS
ಹೆಣ್ಣು ಮಕ್ಕಳ ರಕ್ಷಣೆಗೆ ತಾವಿರುವುದಾಗಿ ಹೇಳಿಕೊಳ್ಳುವ ಹಿಂದೂ ನಾಯಕರು ಈಗ ಎಲ್ಲಿದ್ದಾರೆ? – ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ

ಮಂಗಳೂರು ಜುಲೈ 19: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಧೇಯ ವ್ಯಕ್ತಿಯ ಸಾಕ್ಷಿದಾರನಾಗಿ ಬಂದು ದೂರು ನೀಡಿದರೂ ಪೊಲೀಸ್ ಇಲಾಖೆ ಮಾತ್ರ ತನಿಖೆ ಬಗ್ಗೆ ಆಸಕ್ತಿ ತೋರಿಸುತ್ತಿಲ್ಲ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರ ಯಾವುದೇ ಆಸಕ್ತಿ ತೋರಿಸುತ್ತಿಲ್ಲ. ಸರಕಾರದ ಜೊತೆಗೆ ಇಂತಹ ಕೃತ್ಯಗಳನ್ನು ಮುಚ್ಚಿಡುವ ಪ್ರಯತ್ನ ಮಾಡುತ್ತಿದೆ ಎಂಬ ಸಂಶಯ ಮೂಡುತ್ತಿದೆ. ಹೆಣ್ಣು ಮಕ್ಕಳ ರಕ್ಷಣೆಗಾಗಿ ನಾವಿದ್ದೇವೆ ಎಂದು ಹೇಳುವ ಸ್ವಯಂ ಘೋಷಿತ ಹಿಂದೂ ನಾಯಕರು ಇಷ್ಟು ಹೆಣ್ಣುಮಕ್ಕಳ ಮೇಲೆ ದೌರ್ಜನ್ಯವಾಗಿ ಕೊಲೆಯಾದರೂ ಕೂಡ ಯಾಕೆ ಇವರು ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಕೂಲಂಕುಶವಾದ ತನಿಖೆ ಶೀಘ್ರವಾಗಿ ನಡೆಯಬೇಕಿದ್ದು, ವಿಳಂಭ ಸಾಕ್ಷಿ ನಾಶಕ್ಕಾಗಿ ಮಾಡುತ್ತಿದ್ದಾರೆ ಎಂಬ ಸಂಶಯ ಮೂಡುತ್ತಿದ್ದು, ತನಿಖೆಗಾಗಿ ಪ್ರತಿಭಟನೆ ಮಾಡಲು ಕೂಡ ಪೊಲೀಸ್ ಇಲಾಖೆ ಅವಕಾಶ ನೀಡುತ್ತಿಲ್ಲ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲಾಗುತ್ತಿದ್ದು, ಇದರ ಹಿಂದೆ ದೊಡ್ಡ ವ್ಯವಸ್ಥೆಯೇ ಶಾಮೀಲಾಗಿದೆ ಎಂಬ ಸಂಶಯ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದರು. ಈ ಪ್ರಕರಣದ ನ್ಯಾಯಕ್ಕಾಗಿ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯಮಟ್ಟದಲ್ಲಿ ಪ್ರತಿಭಟನೆಯನ್ನು ಆಯೋಜಿಸಿದ್ದು, ಈ ಪ್ರತಿಭಟನೆಯ ಪೋಸ್ಟರ್ ಕ್ಯಾಂಪೆನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ ಎಂದರು.
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಕೊಲೆ ಕೃತ್ಯದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಆಸಕ್ತಿ ತೋರದಿರುವುದನ್ನು ಗಮನಿಸಿದರೆ, ಇದರ ಹಿಂದೆ ದೊಡ್ಡ ವ್ಯವಸ್ಥೆಯೇ ಶಾಮೀಲಾಗಿರುವ ಅನುಮಾನ ಮೂಡುತ್ತಿದೆ’ ಎಂದು ವಿಮೆನ್ ಇಂಡಿಯಾ ಮೂವ್‌ಮೆಂಟ್‌ನ ರಾಜ್ಯ ಘಟಕದ ಅಧ್ಯಕ್ಷೆ ಫಾತಿಮಾ ನಸೀಮಾ ಹೇಳಿದರು.