DAKSHINA KANNADA
ಧರ್ಮಸ್ಥಳ ಪ್ರಕರಣದ ಎಸ್‌ಐಟಿ ಸೇರಲು ಇಬ್ಬರು ಐಪಿಎಸ್ ಅಧಿಕಾರಿಗಳು ಹಿಂದೇಟು?

ಬೆಂಗಳೂರು ಜುಲೈ 21: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣದ ತನಿಖೆಗೆ ರಾಜ್ಯ ಸರಕಾರ ಎಸ್ಐಟಿ ರಚಿಸಿದೆ. ಆದರೆ ಈ ಎಸ್‌ಐಟಿ ರಚನೆ ಬೆನ್ನಲ್ಲೇ ತಂಡದ ಇಬ್ಬರು ಐಪಿಎಸ್ ಅಧಿಕಾರಿಗಳು ವೈಯಕ್ತಿಕ ಕಾರಣ ಮುಂ ದಿಟ್ಟು ಈ ತಂಡದಿಂದ ಹೊರಗುಳಿಯಲು ಮುಂದಾಗಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದೆ. SIT ತಂಡ ರಚಿಸಿ ಅರ್ಧ ದಿನ ಕಳೆಯುವಷ್ಟರಲ್ಲೇ ಆರಂಭಿಕ ವಿಘ್ನ ಎದುರಾಗಿದೆ. ವಿಶೇಷ ತನಿಖಾ ತಂಡದ ನಾಲ್ವರಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳು ಹಿಂದಕ್ಕೆ ಸರಿದಿದ್ದಾರೆ ಅನ್ನೋ ಮಾಹಿತಿ ಉನ್ನತ ಮೂಲಗಳಿಂದ ತಿಳಿದುಬಂದಿದೆ. ತನಿಖೆಯಿಂದ ಹಿಂದೆ ಸರಿಯೋಕೆ ಇಬ್ಬರು ಅಧಿಕಾರಿಗಳು ತಯಾರಿ ನಡೆಸಿದ್ದಾರೆ. ಈ ಸಂಬಂಧ ಐಪಿಎಸ್ ಅಧಿಕಾರಿಗಳಾದ ಎಂ.ಎನ್ ಅನುಚೇತ್ ಮತ್ತು ಸೌಮ್ಯಲತಾ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ. ವೈಯಕ್ತಿಕ ಕಾರಣಗಳನ್ನ ನೀಡಿ ಎಸ್‌ಐಟಿ ತಂಡದಿಂದ ತಮ್ಮನ್ನು ಕೈಬಿಡುವಂತೆ ಸೋಮವಾರ ಪತ್ರ ಬರೆಯಲು ಸಿದ್ಧತೆ ನಡೆಸಿದ್ದಾರೆ ಎಂದು ಉನ್ನತ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಪ್ರಕರಣದ ಸಮಗ್ರ ತನಿಖೆಗೆ ಎಸ್‌ಐಟಿ ರಚಿಸಿದೆ. ಈ ಹಿಂದೆ ಗಂಭೀರ ಪ್ರಕರಣಗಳ ತನಿಖೆಯ ಲ್ಲಿ ತೋರಿದ ಕರ್ತವ್ಯ ನಿಷ್ಠೆ ಹಾಗೂ ಕಾರ್ಯ ದಕ್ಷತೆ ಆಧರಿಸಿ ನಾಲ್ವರು ಐಪಿಎಸ್ ಅಧಿಕಾರಿಗ ಳನ್ನು ಈ ಎಸ್‌ಐಟಿಗೆ ಆಯ್ಕೆ ಮಾಡಿದೆ. ಇದೀಗ ಎಸ್‌ಐಟಿಯಿಂದ ಇಬ್ಬರು ಐಪಿಎಸ್ ಅಧಿಕಾರಿಗಳು ಹೊರಬರಲು ಮನಸ್ಸು ಮಾಡಿದ್ದಾರೆ. ಒಂದು ವೇಳೆ ಅವರು ಈಎಸ್‌ಐಟಿಯಿಂದ ತಮ್ಮನ್ನು ಕೈ ಬಿಡುವಂತೆ ಸರ್ಕಾರಕ್ಕೆ ಪತ್ರ ಬರೆದರೆ, ಸರ್ಕಾರ ಆ ಇಬ್ಬರು ಅಧಿಕಾರಿಗಳನ್ನು ಕರೆಸಿ ಮನವೊಲಿ ಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.