Connect with us

    BELTHANGADI

    ಶಿವರಾತ್ರಿಯಂದೇ ಧರ್ಮಸ್ಥಳದ ಆನೆ ಲತಾ ನಿಧನ

    ಬೆಳ್ತಂಗಡಿ ಮಾರ್ಚ್ 08: ಮಹಾಶಿವರಾತ್ರಿಯ ದಿನವಾದ ಇಂದು ಧರ್ಮಸ್ಥಳದ ಭಕ್ತರಿಗೆ ದುಃಖದ ಸುದ್ದಿ ಬಂದಿದೆ. ಇಂದು ಧರ್ಮಸ್ಥಳದ ಆನೆ ಲತಾ ಸಾವನಪ್ಪಿದೆ. ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನೆ ಲತಾ ಇಂದು ಸಾವನಪ್ಪಿದೆ. ಕಳೆದ 50 ವರ್ಷಗಳಿಂದ ಆನೆ ಲತಾ ಶ್ರೀಕ್ಷೇತ್ರ ಧರ್ಮಸ್ಥಳದ ಸೇವೆಯಲ್ಲಿ ನಿರತವಾಗಿತ್ತು.

    ಲತಾ ಸುಮಾರು 50 ವರ್ಷಗಳಿಂದ ಧರ್ಮಸ್ಥಳ ಜಾತ್ರಾಮಹೋತ್ಸವದಲ್ಲಿ ಗಾಂಭೀರ್ಯದ ಹೆಜ್ಜೆ ಹಾಕಿ ಭಕ್ತರ ಗಮನವನ್ನು ತನ್ನತ್ತ ಸೆಳೆಯುತ್ತಿತ್ತು. ಧರ್ಮಸ್ಥಳದಲ್ಲಿ ಪ್ರಸ್ತುತ ಲತಾ, ಲಕ್ಷ್ಮೀ ಹಾಗೂ ಶಿವಾನಿ ಎಂಬ ಹೆಸರಿನ ಆನೆಗಳಿದ್ದು, ಲತಾ ಸಾವಿನಿಂದ ಲಕ್ಷ್ಮೀ ಹಾಗೂ ಶಿವಾನಿ ಆನೆಗಳು ಮಂಕಾಗಿವೆ. ಸದ್ಯ ಲತಾ ಆನೆಯ ಅಂತ್ಯಸಂಸ್ಕಾರ ಶುಕ್ರವಾರ ಸಂಜೆ ವೇಳೆಗೆ ನಡೆಯುವ ಸಾಧ್ಯತೆ ಇದೆ. ಆನೆ ಸಾವಿನ ಸುದ್ದಿ ತಿಳಿದು ಸುತ್ತಮುತ್ತಲ ಭಕ್ತರು ದೇವಸ್ಥಾನದ ಬಳಿ ಆಗಮಿಸುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply