BELTHANGADI
ಧರ್ಮಸ್ಥಳ – ಎರಡು ಮತ್ತು ಮೂರನೇ ಸ್ಥಳದಲ್ಲೂ ಸಿಗದ ಕಳೇಬರ ಸಾಕ್ಷಿ

ಬೆಳ್ತಂಗಡಿ ಜುಲೈ 30: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಶವಗಳ ಶೋಧ ಕಾರ್ಯ ಮುಂದುವರೆದಿದ್ದು, ಈಗಾಗಲೇ ಮೂರು ಸ್ಥಗಳಲ್ಲೂ ಶೋಧ ನಡೆಸಿದರೂ ಯಾವುದೇ ರೀತಿ ಸಾಕ್ಷ್ಯ ಸಿಕ್ಕಿಲ್ಲ ಎಂದು ತಿಳಿದು ಬಂದಿದೆ.
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಅನಾಮಿಕನ ದೂರಿನ ಹಿನ್ನಲೆ ಇದೀಗ ಶೋಧ ಕಾರ್ಯ ನಡೆಸಲಾಗುತ್ತಿದೆ. ಇಂದು ಬೆಳಗ್ಗೆ 11 ಗಂಟೆಯಿಂದ ಸಾಕ್ಷಿ ದೂರುದಾರ ವ್ಯಕ್ತಿ ತೋರಿಸಿದ ಎರಡನೇ ಜಾಗದಲ್ಲಿ ಶೋಧ ಕಾರ್ಯ ನಡೆಯಿತು. ನೇತ್ರಾವತಿ ನದಿ ಪಕ್ಕದ ದಟ್ಟ ಕಾಡಿನ ಒಳಗಡೆ ಮಧ್ಯಾಹ್ನ 12:30ರವರೆಗೂ ಶೋಧ ಕಾರ್ಯ ನಡೆದರೂ ಯಾವುದೇ ಕುರುಹು ಪತ್ತೆಯಾಗಿಲ್ಲ.

ಮಧ್ಯಾಹ್ನದ ವೇಳೆಗೆ 3ನೇ ಗುರುತು ಮಾಡಿದ ಸ್ಥಳದಲ್ಲಿ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಯಾವುದೇ ಕಳೇಬರಗಳು ಸಿಕ್ಕಿಲ್ಲ ಎನ್ನಲಾಗಿದೆ. ಇದೇ ವೇಳೆ 4ನೇ ಗುರುತು ಮಾಡಿದ ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿರುವುದಾಗಿ ತಿಳಿದು ಬಂದಿದೆ.