BELTHANGADI
ಡಿಸೆಂಬರ್ 3 ರಂದು ಧರ್ಮಸ್ಥಳ ಲಕ್ಷದೀಪೋತ್ಸವ

ಉಜಿರೆ ನವೆಂಬರ್ 1: ಕಾರ್ತಿಕ ಮಾಸದ ಸಂದರ್ಭ ನಡೆಯುವ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಡಿಸೆಂಬರ್ 3 ರಂದು ನಡೆಯಲಿದೆ.
ಲಕ್ಷ ದೀಪೋತ್ಸವ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ನವೆಂಬರ್ 29ರಿಂದ ಆರಂಭಗೊಂಡು, ಡಿಸೆಂಬರ್ 4ರವರೆಗೆ ನಡೆಯಲಿವೆ. ನವೆಂಬರ್ 29ರಂದು ವಸಂತ ಕಟ್ಟೆ ಉತ್ಸವ, 30ರಂದು ಕೆರೆಕಟ್ಟೆ ಉತ್ಸವ, ಡಿ.1ರಂದು ಲಲಿತೋದ್ಯಾನ ಉತ್ಸವ, ಡಿ.2ರಂದು ಕಂಚಿಮಾರುಕಟ್ಟೆ ಉತ್ಸವ ಹಾಗೂ ಸರ್ವಧರ್ಮ ಸಮ್ಮೇಳನ ನಡೆಯಲಿವೆ. ಡಿ.3ರಂದು ಗೌರಿಮಾರುಕಟ್ಟೆ ಉತ್ಸವ, ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಡಿ.4ರಂದು ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆಯೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಸಮಾಪನಗೊಳ್ಳಲಿವೆ.
