ನೀರಿನ ಬರ ಭಕ್ತರಲ್ಲಿ ಧರ್ಮಸ್ಥಳ ಭೇಟಿ ಮುಂದೂಡಲು ಮನವಿ

ಮಂಗಳೂರು ಮೇ 17: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೀಗ ತೀವ್ರ ನೀರಿನ ಸಮಸ್ಯೆ ಎದುರಾಗಿದೆ. ಇದರ ಪರಿಣಾಮ ಇದೀಗ ಜಿಲ್ಲೆಯ ಪ್ರಮುಖ ಪುಣ್ಯಕ್ಷೇತ್ರ ಗಳ ಮೇಲೆಯೂ ಬಿದ್ದಿದೆ.

ರಾಜ್ಯದ ಹೆಸರಾಂತ ಕ್ಷೇತ್ರವಾದ ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರದಲ್ಲಿ ನೀರಿನ ಸಮಸ್ಯೆ ಉಲ್ಬಣಿಸಿದ ಹಿನ್ನಲೆಯಲ್ಲಿ ಕ್ಷೇತ್ರದ ವತಿಯಿಂದ ಭಕ್ತಾಧಿಗಳು ತಮ್ಮ ಪ್ರವಾಸವನ್ನು ಮುಂದೂಡಲು ಧರ್ಮಸ್ಥಳ ಆಡಳಿತ ಮಂಡಳಿ ಮನವಿ ಮಾಡಿದೆ.

ಜಿಲ್ಲೆಯಲ್ಲಿ ಜಿಲ್ಲಾಡಳಿತ ರೇಶನ್ ಮುಖಾಂತರ ನೀರು ಪೂರೈಸುತ್ತಿದ್ದು, ಕ್ಷೇತ್ರಕ್ಕೂ ನೀರಿನ ಸಮಸ್ಯೆ ಎದುರಾಗಿದೆ. ಧರ್ಮಸ್ಥಳಕ್ಕೆ ಬರುವ ಯಾತಾರ್ಥಿಗಳ ಉಪಯೋಗಕ್ಕೆ ಅಧಿಕ ಪ್ರಮಾಣದ ನೀರು ಬೇಕಾಗುತ್ತಿದ್ದು, ಈ ಕಾರಣಕ್ಕಾಗಿ ಭಕ್ತಾಧಿಗಳು ಹಾಗೂ ಪ್ರವಾಸಿಗರು ತಮ್ಮ ಪ್ರವಾಸವನ್ನು ಕೆಲವು ದಿನಗಳ ಕಾಲ ಮುಂದೂಡುವಂತೆ ಮನವಿ ಮಾಡಿದೆ.