LATEST NEWS
ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ- ಸರ್ಕಾರದಿಂದ 100 ಕೋಟಿ ರೂಪಾಯಿ ಅನುದಾನ ಘೋಷಣೆ
ಮಂಗಳೂರು ಅಗಸ್ಟ್ 27: ರಾಜ್ಯದಲ್ಲಿ ಅತ್ಯಧಿಕ ಭಕ್ತರು ಸಂದರ್ಶಿಸುವ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಬೆಳ್ತಂಗಡಿಯಲ್ಲಿ ಶನಿವಾರ 1500 ಫಲಾನುಭವಿಗಳಿಗೆ ವಸತಿ ಆದೇಶ ಪತ್ರ ವಿತರಣೆಗೊಳಿಸಿ ಅವರು ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಭಾಗದಲ್ಲಿ ನಾಲ್ಕು ಹೆಲಿಕಾಪ್ಟರ್‌ಗಳು ಏಕ ಕಾಲದಲ್ಲಿ ಲ್ಯಾಂಡಿಂಗ್ ಆಗಲು ಅವಕಾಶವಿರುವ ಲಘು ವಿಮಾನ ನಿಲ್ದಾಣ ನಿರ್ಮಿಸಲಾಗುವುದು, ರಾಜ್ಯಸಭಾ ಸದಸ್ಯ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಮತ್ತು ಶಾಸಕ ಹರೀಶ್ ಪೂಂಜಾಅವರ ಕೋರಿಕೆಯಂತೆ ಪ್ರಸ್ತಾವಿತ ಯೋಜನೆಯನ್ನು ಕಾರ್ಯಗತಗೊಳಿಸಲು ಉದ್ದೇಶಿಸಲಾಗಿದ್ದು, ಪ್ರಥಮ ಹಂತದಲ್ಲಿ 100 ಕೋಟಿ ರೂ. ಅನುದಾನವನ್ನು ಸರ್ಕಾರ ಬಿಡುಗಡೆಗೊಳಿಸಲಿದೆ ಎಂದರು.
You must be logged in to post a comment Login