ಬೆಳ್ತಂಗಡಿ,ಮೇ 29: ಮೇ 30 ಮತ್ತು 31 ರಂದು ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಾಲಯದ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಭದ್ರತೆ ದೃಷ್ಟಿಯಿಂದ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಭಾರತದ ಉಪರಾಷ್ಟ್ರಪತಿರವರು ಮೇ 31 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿ, ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ಎಂಬಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಭದ್ರತಾ ಹಿತದೃಷ್ಟಿಯಿಂದ ಮೇ 30 ಮತ್ತು 31 ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ದೇವಸ್ಥಾನದ ಸುತ್ತಮುತ್ತಲಿನ 1500 ಮೀ. ವ್ಯಾಪ್ತಿಯನ್ನು ಮತ್ತು ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ಎಂಬಲ್ಲಿ ಕಾರ್ಯಕ್ರಮ ನಡೆಯುವ ಪ್ರದೇಶದ ಸುತ್ತಮುತ್ತಲಿನ 1500 ಮೀ ವ್ಯಾಪ್ತಿಯನ್ನು ನೋ ಫ್ಲೈ ಝೋನ್ ಮತ್ತು ನೋ ಡ್ರೋನ್ ಝೋನ್ ಎಂದು ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.