Connect with us

    BELTHANGADI

    ಧರ್ಮಸ್ಥಳ ಈಗ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ – ಡಾ.ಡಿ.ವೀರೇಂದ್ರ ಹೆಗ್ಗಡೆ

    ಬೆಳ್ತಂಗಡಿ ಅಕ್ಟೋಬರ್ 03: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನದಂತೆ ಧರ್ಮಸ್ಥಳ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಎಂದು ಧರ್ಮಸ್ಥಳದ ಧಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪ್ರಕಟಿಸಿದ್ದಾರೆ. ಸೋಮವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ನಡೆದ ಸರಳ ಸಮಾರಂಭದಲ್ಲಿ ಘೋಷಣಾ ಫಲಕ ಅನಾವರಣ ಮಾಡಿ ಅಧಿಕೃತ ಘೋಷಣೆ ಪ್ರಕಟಿಸಿದರು.


    ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ಮರಣೆಯೊಂದಿಗೆ ಅವರ ತ್ವ ಆದರ್ಶಗಳನ್ನು ನಾವು ಪಾಲಿಸಬೇಕು. ಬೀದರ್, ಕಲಬುರ್ಗಿ, ಮಂಗಳೂರು, ಮೈಸೂರು ಮತ್ತು ಧರ್ಮಸ್ಥಳವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರಗಳನ್ನಾಗಿ ಮಾಡಲು ಆಯ್ಕೆ ಮಾಡಿದ್ದು ಧರ್ಮಸ್ಥಳ ಗ್ರಾಮ ಪಂಚಾಯಿತಿಯನ್ನು ಅಭಿನಂದಿಸಿ ಧರ್ಮಸ್ಥಳದ ಮೂಲಕ ಇಡಿ ಕರ್ನಾಟಕ ರಾಜ್ಯವೇ ದೇಶದ ಪ್ರಥಮ ಪ್ಲಾಸ್ಟಿಕ್ ಮುಕ್ತ ರಾಜ್ಯವಾಗಲಿ ಎಂದು ಹೆಗ್ಗಡೆ ಹಾರೈಸಿದರು.

    ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧದಾನ ಎ೦ಬಚತುರ್ವಿಧದಾನಗಳು ನಿತ್ಯೋತ್ಸವವಾಗಿರುವಧರ್ಮಸ್ಥಳದಲ್ಲಿ ಸ್ಥಳೀಯರು ಹಾಗೂ ಕ್ಷೇತ್ರಕ್ಕೆ ಬರುವ ಭಕ್ತಾದಿಗಳ ಆರೋಗ್ಯ ರಕ್ಷಣೆ ಮತ್ತು ಸ್ವಚ್ಛತೆ ಬಗ್ಗೆ ವಿಶೇಷ ಆದ್ಯತೆ ನೀಡಲಾಗುತ್ತದೆ. ಧರ್ಮಸ್ಥಳವು ದೇಶದ ಉತ್ತಮ ಸ್ವಚ್ಛ ಧಾರ್ಮಿಕ ಶ್ರದ್ಧಾ ಕೇಂದ್ರ ಎಂಬ ಗೌರವಕ್ಕೆ ಪಾತ್ರವಾಗಿದ್ದು ಧರ್ಮಸ್ಥಳದಲ್ಲಿ ಬೀಡಿ, ಸಿಗರೇಟು, ಮದ್ಯ ಮಾರಾಟ ಇರುವುದಿಲ್ಲ. ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧಿಸಲಾಗಿದೆ. ಗ್ರಾಮ ಪಂಚಾಯಿತಿ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಈ ಬಗ್ಗೆ ಜನಜಾಗೃತಿ ಮೂಡಿಸಲಾಗುತ್ತದೆ. ಧರ್ಮಸ್ಥಳದಲ್ಲಿ ಬೀಡಿ, ಸಿಗರೇಟು, ಮದ್ಯ ಮಾರಾಟ ಇರುವುದಿಲ್ಲ. ಈಗಾಗಲೆ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ಗ್ರಾಮ ಪಂಚಾಯಿತಿ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಈ ಬಗ್ಗೆ ಜನಜಾಗೃತಿ ಮೂಡಿಸಲಾಗುತ್ತದೆ.

    Share Information
    Advertisement
    Click to comment

    You must be logged in to post a comment Login

    Leave a Reply