BELTHANGADI
ಧರ್ಮಸ್ಥಳ – ಅನಾಮಧೇಯ ವ್ಯಕ್ತಿಯ ದೂರಿಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಯಾವುದೇ ಕಳೆಬರಹ ನೀಡಿಲ್ಲ – ಪೊಲೀಸ್ ಇಲಾಖೆ ಸ್ಪಷ್ಟನೆ

ಧರ್ಮಸ್ಥಳ ಜುಲೈ 05: ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಗೆ ದೂರು ನೀಡಿರುವ ಅನಾಮಧೇಯ ವ್ಯಕ್ತಿಯ ದೂರಿನಲ್ಲಿರುವಂತೆ ಪೊಲೀಸ್ ಠಾಣೆಗೆ ಯಾವುದೇ ಮೃತ ವ್ಯಕ್ತಿಯ ಕಳೆಬರಹ ನೀಡಿಲ್ಲ ಎಂದುೂ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಪತ್ರಿಕಾಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಪೊಲೀಸರು ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ: 39/2025 ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ದೂರುದಾರರ ವಕೀಲರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯನ್ನು ನೋಡಿ, ಹಲವರು ದೂರಿನಲ್ಲಿ ಉಲ್ಲೇಖಿಸಿರುವ ಕಳೆಬರಹದ ಕುರಿತು ವಿಚಾರಿಸಿರುತ್ತಾರೆ.

ಈ ವಿಷಯದ ಬಗ್ಗೆ ಸ್ಪಷ್ಟನೆ ಏನೆಂದರೆ, ಸದ್ರಿ ದೂರಿಗೆ ಸಂಬಂಧಿಸಿದಂತೆ, ಈವರೆಗೆ ಪೊಲೀಸ್ ಠಾಣೆಗೆ ತಲೆಬುರುಡೆ ಹಾಗೂ ಅವಶೇಷದ ಕೆಲಭಾಗಗಳಿರುವ ಎರಡು ಫೋಟೋಗಳ ಕಲರ್ ಝೆರಾಕ್ಸ್ ಪ್ರತಿಯನ್ನು ಮಾತ್ರ ಸಲ್ಲಿಸಿರುತ್ತಾರೆ. ಇದನ್ನು ಹೊರತುಪಡಿಸಿದಂತೆ ಯಾವುದೇ ಕಳೆಬರಹವನ್ನು ಈವರೆಗೆ ಪೊಲೀಸ್ ಠಾಣೆಗೆ ನೀಡಿರುವುದಿಲ್ಲ. ದೂರುದಾರರ ಪರವಾಗಿ ವಕೀಲರು ದೂರು ಸಲ್ಲಿಸುವ ವೇಳೆ ಕಲೆಬರಹವನ್ನು ಮುಂದಿನ ಹಂತದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ಲಿಖಿತವಾಗಿ ತಿಳಿಸಿರುತ್ತಾರೆ ಎಂದಿದ್ದಾರೆ.
Pingback: ಯುವತಿಗೆ ಮಗು ಕರುಣಿಸಿ ನಾಪತ್ತೆಯಾಗಿದ್ದ ಕೃಷ್ಣ ಜೆ ರಾವ್ ಮೈಸೂರಿನಲ್ಲಿ ಅರೆಸ್ಟ್ - themangaloremirror.in