BELTHANGADI
ಸೌಜನ್ಯಾ ಪ್ರಕರಣದಲ್ಲಿ ಕ್ಷೇತ್ರದ ತೇಜೋವಧೆ – ಧರ್ಮಸ್ಥಳದಲ್ಲಿ ಬೃಹತ್ ಪ್ರತಿಭಟನೆ

ಧರ್ಮಸ್ಥಳ ಮಾರ್ಚ್ 27: ಸಾಮಾಜಿಕ ಜಾಲತಾಣದಲ್ಲಿ ಸೌಜನ್ಯ ಪ್ರಕರಣದಲ್ಲಿ ಧರ್ಮಸ್ಥಳದ ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಧರ್ಮಸ್ಥಳದಲ್ಲಿ ಭಕ್ತಾಧಿಗಳು ಮತ್ತು ಗ್ರಾಮಸ್ಥರು ಪ್ರತಿಭಟನೆ ಸಭೆ ನಡೆಸಿದರು.
ಕಳೆದ ಕೆಲ ದಿನಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಯೂಟ್ಯೂಬ್, ಫೇಸ್‌ಬುಕ್ ಸಹಿತ ಸಾಮಾಜಿಕ ಜಾಲತಾಣಗಳಲ್ಲಿ ತೀರಾ ಅವಹೇಳನಕಾರಿಯಾದ ಆಧಾರರಹಿತ ಮಾಹಿತಿಗಳು ಹರಿದಾಡುತ್ತಿದ್ದು ಇದರಿಂದ ನಮ್ಮ ಗ್ರಾಮದ ಘನತೆಗೆ ಹಾನಿಯಾಗಿದೆ.

ಇಲಿ ಮುಖ್ಯವಾಗಿ ಸೌಜನ್ಯಾ ಪ್ರಕರಣ ಮುಂದಿರಿಸಿ, ಕ್ಷೇತ್ರದ ತೇಜೋವಧೆ ಮಾಡಲಾಗುತ್ತಿದೆ. ಸೌಜನ್ಯಾ ಪ್ರಕರಣಕ್ಕೂ ಕ್ಷೇತ್ರಕ್ಕೂ ಯಾವುದೇ ಸಂಬಂಧವಿಲ್ಲ. ವಿನಾಕಾರಣ ಪೂರ್ವಾಗ್ರಹ ಪೀಡಿತರಾಗಿ ಕೆಲ ಸ್ಥಾಪಿತ ಹಿತಾಸಕ್ತಿಗಳು ಸೌಜನ್ಯಾ ಪ್ರಕರಣದಲ್ಲಿ ಕ್ಷೇತ್ರದ ತೇಜೋವಧೆ ಮಾಡುತ್ತಿದ್ದಾರೆ. ಇವರ ಈ ಕುಕೃತ್ಯ ಧರ್ಮಸ್ಥಳ ಗ್ರಾಮದವರಾದ ನಮಗೂ ಮುಜುಗರ ತರುವಂತೆ ಮಾಡಿದೆ. ಸೌಜನ್ಯಾ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ನಾವು ಧರ್ಮಸ್ಥಳ ಗ್ರಾಮದ ನಿವಾಸಿಗರು ಆರಂಭದಿಂದಲೂ ಆಗ್ರಹಿಸುತ್ತಾ ಬಂದಿದ್ದೇವೆ. ಆದರೆ ಇದೇ ವಿಚಾರವನ್ನು ಮುಂದಿಟ್ಟು ಸಂವಿಧಾನಬಾಹಿರವಾಗಿ ಕ್ಷೇತ್ರದ ತೇಜೋವಧೆ ಮಾಡುವುದನ್ನು ನಾವು ಧರ್ಮಸ್ಥಳ ಗ್ರಾಮಸ್ಥರು ಉಗ್ರವಾಗಿ ಖಂಡಿಸುತ್ತೇವೆ ಎಂದು ತೆಂಗಿನ ಕಾಯಿ ಒಡೆದು ಪ್ರಾರ್ಥಿಸಲಾಯಿತು.
ಸರಕಾರದ ಮುಂದೆ ಈ ಆಗ್ರಹವನ್ನು ಮುಂದಿರಿಸಿ ಒಂದು ದಿನದ ಹರತಾಳ ಬಳಿಕ ಅಮೃತವರ್ಷಣಿ ಸಭಾಭವನದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದರು.
1 Comment