KARNATAKA
ಪರಿಷತ್ ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ…!

ಚಿಕ್ಕಮಗಳೂರು, ಡಿಸೆಂಬರ್ 29: ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ (64) ಮೃತದೇಹ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಗುಣಸಾಗರ ಸಮೀಪದ ರೈಲ್ವೆ ಹಳಿ ಸಮೀಪ ಇಂದು ಮುಂಜಾನೆ ಪತ್ತೆಯಾಗಿದೆ.
ಸಖರಾಯಪಟ್ಟಣ ಸಮೀಪದ ತೋಟದ ಮನೆಯಿಂದ ಧರ್ಮೇಗೌಡ ಸೋಮವಾರ ಸಂಜೆ ಕಾರಿನಲ್ಲಿ ತೆರಳಿದ್ದರು. ರಾತ್ರಿಯಾದರೂ ಮನೆಗೆ ವಾಪಾಸಗಿರಲಿಲ್ಲ. ಆಗ ಗನ್‌ಮ್ಯಾನ್, ಪೊಲೀಸರು ಮತ್ತು ಸ್ಥಳೀಯರು ಧರ್ಮೇಗೌಡ ಅವರಿಗಾಗಿ ಹುಡುಕಾಟ ನಡೆಸಿದ್ದರು. ಆ ವೇಳೆ ಅವರ ಮೃತದೇಹ ರೈಲ್ವೆ ಹಳಿ ಸಮೀಪ ಪತ್ತೆಯಾಗಿದೆ. ಚಿಕ್ಕಮಂಗಳೂರು ಶಾಸಕ ಸಿ.ಟಿ.ರವಿ ಸ್ಥಳಕ್ಕೆ ಧಾವಿಸಿದ್ದು, ಸ್ಥಿತಿಗತಿ ಪರಿಶೀಲಿಸಿದ್ದಾರೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ತೆರಳಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ.