Connect with us

FILM

ಇವತ್ತು ಇವಳಿರ್ತಾಳೆ, ನಾಳೆ ಅವಳಿರ್ತಾಳೆ ನಾನ್ಯಾಕೆ ಇವರ ಬಗ್ಗೆ ತಲೆಕೆಡಿಸಿಕೊಳ್ಳಲಿ – ನಟ ದರ್ಶನ್

ಮಂಡ್ಯ ಫೆಬ್ರವರಿ 18: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಚಿತ್ರರಂಗಕ್ಕೆ ಬಂದು 25 ವರ್ಷಗಳಾದ ಹಿನ್ನಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ರಂಗನಾಥ್ ಸ್ವಾಮಿ ದೇವಾಲಯದ ಆವರಣದಲ್ಲಿ ಬೆಳ್ಳಿಪರ್ವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


ಈ ವೇಳೆ ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ ದರ್ಶನ, ತಮ್ಮ ವಿರುದ್ದ ಆಗಾಗ ಸುತ್ತಿಕೊಳ್ಳುವ ವಿವಾದ ಕುರಿತಂತೆ ಮಾತನಾಡಿದರು. ಈ ವೇಳೆ ಅವರು ಇವತ್ತು ಇವಳಿರ್ತಾಳೆ, ನಾಳೆ ಅವಳಿರ್ತಾಳೆ ನಾನ್ಯಾಕೆ ಇವರ ಬಗ್ಗೆ ತಲೆಕೆಡಿಸಿಕೊಳ್ಳಲಿ. ನನಗೆ ನನ್ನ ಕೆಲಸ ಅಷ್ಟೆ ಮುಖ್ಯ’ ಎಂದರು. ಚಿತ್ರರಂಗ, ರಾಜಕೀಯ, ಬ್ಯುಸಿನೆಸ್ ಯಾವುದೇ ಆಗಿರಲಿ ಶ್ರಮ ಇರಲೇಬೇಕು. ಶ್ರದ್ಧೆ ಬೇಕೇಬೇಕು. ಆರಂಭದಲ್ಲಿ ಅವಮಾನಗಳನ್ನು ಎದುರಿಸಲೇ ಬೇಕು. ಅವಮಾನಗಳು ಆದರೇನೆ ಸನ್ಮಾನ. ಚಪ್ಪಲಿಯಲ್ಲಿ ಹೊಡೆದರೆ ಹೊಡೀರಿ, ಹಾರ ಹಾಕಿಸಿಕೊಳ್ಳುವುದಕ್ಕೆ ಮಾತ್ರ ರೆಡಿ ಇದ್ದರೆ ಸಾಲದು, ಚಪ್ಪಲಿ ಬಿದ್ದಾಗ ಅದನ್ನೂ ಸ್ವೀಕರಿಸಬೇಕು.

ನನ್ನಷ್ಟು ವಿವಾದ ಯಾರಿಗೂ ಸುತ್ತಿಕೊಳ್ಳಲ್ಲ. ಹೌದು ನಾನು ಬ್ಯಾಡ್ ಬಾಯ್. ಕಷ್ಟಪಟ್ಟಾಗ ಮಾತುಗಳು ಕಹಿಯಾಗಿರುತ್ತೆ. ಅದು ಕೆಲವರಿಗೆ ಹಿಡಿಸಲ್ಲ. ಫ್ಯಾಮಿಲಿ ಸಮಸ್ಯೆಗಳು, ಎಲ್ಲ ಸಮಸ್ಯೆಗಳನ್ನು ಬದಿಗಿಡುತ್ತೀನಿ. ನನ್ನ ಸೆಲೆಬ್ರಿಟಿಗಳು, ನನ್ನ ಕೆಲಸ ಮುಖ್ಯ, ಬೇರೆಯದಕ್ಕೆ ತಲೆಕೆಡಿಸಿಕೊಳ್ಳಲ್ಲ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *