LATEST NEWS
ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ ಗೆದ್ದ ಆಳ್ವಾಸ್ ವಿಧ್ಯಾರ್ಥಿ
ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ ಗೆದ್ದ ಆಳ್ವಾಸ್ ವಿಧ್ಯಾರ್ಥಿ
ಮಂಗಳೂರು ಅಗಸ್ಟ್ 28:ಆಳ್ವಾಸ್ ಶಿಕ್ಷಣ ಸಂಸ್ಥೆ ವಿಧ್ಯಾರ್ಥಿ ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 400 ಮೀಟರ್ ಹರ್ಡಲ್ಸ್ ಅನ್ನು 48.96 ಸೆಕೆಂಡ್‌ಗಳಲ್ಲಿ ಕ್ರಮಿಸಿ ಬೆಳ್ಳಿ ಪದಕ ಪಡೆದ ಧಾರುಣ್ ಅಯ್ಯಸ್ವಾಮಿ ಮೂಡುಬಿದಿರೆ ಆಳ್ವಾಸ್‌ನ ತೃತೀಯ ಬಿಎಚ್ಆರ್ಡಿ ವಿದ್ಯಾರ್ಥಿಯಾಗಿದ್ದಾರೆ.
ಇಂದು ನಡೆದ 400 ಮೀಟರ್ ಹರ್ಡಲ್ಸ್ ನಲ್ಲಿ 48.96 ಸೆಕೆಂಡ್ ಗಳಲ್ಲಿ ಕ್ರಮಿಸಿ ಬೆಳ್ಳಿ ಪದಕವನ್ನು ಪಡೆದಿದ್ದಾರೆ. ಅಲ್ಲದೆ ತಮ್ಮ ವೈಯುಕ್ತಿಕ ಸಾಧನೆಯನ್ನು ಉತ್ತಮಗೊಳಿಸಿದ್ದಾರೆ.
ಧಾರುಣ್ ಅಯ್ಯಸ್ವಾಮಿ ಮೂಲತಃ ತಮಿಳುನಾಡಿನವರು. ಆಳ್ವಾಸ್ ಕಾಲೇಜಿನ ಕ್ರೀಡಾ ದತ್ತು ಯೋಜನೆಯಡಿ ಆಳ್ವಾಸ್ ಕಾಲೇಜಿನಲ್ಲಿ ಉಚಿತ ವ್ಯಾಸಂಗ ಮಾಡುತ್ತಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ 400 ಮೀಟರ್ ಹರ್ಡಲ್ಸ್‌ನಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿ ಅಖಿಲ ಭಾರತ ಅಥ್ಲೆಟಿಕ್ ಚಾಂಪಿಯನ್ ಶಿಪ್‌ನಲ್ಲಿ ಮೂರು ಬಾರಿ ಚಿನ್ನ ಹಾಗೂ ಕೂಟ ದಾಖಲೆಯ ಸಾಧನೆ ಮಾಡಿದ್ದಾರೆ.
ಧಾರುಣ್ ಅಯ್ಯಸ್ವಾಮಿ 2016ರಲ್ಲಿ ನಡೆದ ರಿಯೋ ಒಲಿಂಪಿಕ್ಸ್ ಹಾಗೂ 2017ರಲ್ಲಿ ಆಸ್ಟ್ರೇಲಿಯದಲ್ಲಿ ನಡೆದ ಕಾಮನ್ ವೆಲ್ತ್ ಗೇಮ್ಸ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಸಾಧನೆ ಮಾಡಿದ್ದಾರೆ.
ಧಾರುಣ್ ಸಾಧನೆಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ.ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.