Connect with us

    KARNATAKA

    ಧಾರವಾಡ – ಭೀಕರ ಸರಣಿ ಅಪಘಾತಕ್ಕೆ ನಾಲ್ವರ ಬಲಿ

    ಧಾರವಾಡ ಜನವರಿ 6: ಎರಡು ಕಾರು ಮತ್ತು ಲಾರಿ ನಡುವೆ ನಡೆದ ಸರಣಿ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಶನಿವಾರ ಬೆಳ್ಳಂಬೆಳಗ್ಗೆ ಸಂಭವಿಸಿದೆ.


    ಮೃತರನ್ನು ಹಾಸನದ ಮಣಿಕಂಠ (26ವ), ಪವನ(23ವ), ಚಂದನ (31ವ) ಮತ್ತು ಬೆಂಗಳೂರಿನ ಪ್ರಭು (34ವ) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿ ಕಿಮ್ಸ್​​​ ಆಸ್ಪತ್ರೆಗೆ ದಾಖಲಿಸಲಾಗಿದೆ.
    ಹಾಸನದಿಂದ ಗೋವಾಗೆ ತೆರಳುತ್ತಿದ್ದ ಕಾರು ಮತ್ತು ಬೆಂಗಳೂರಿನಿಂದ ಶಿರಡಿಗೆ ತೆರಳುತಿದ್ದ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಧಾರವಾಡ ಎಸ್ಪಿ ಡಾ ಗೋಪಾಲ ಬ್ಯಾಕೋಡ್ ಭೇಟಿ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply