Connect with us

    FILM

    ಸಿನೆಮಾ ಶೂಟಿಂಗ್ ಇದೆ – ನನಗೆ ಸಚಿವ ಸ್ಥಾನ ಬೇಡ ಎಂದ ಕೇರಳದ ಬಿಜೆಪಿ ಮೊದಲ ಸಂಸದ ಸುರೇಶ್ ಗೋಪಿ

    ನವದೆಹಲಿ ಜೂನ್ 10 : ನಿನ್ನೆಯಷ್ಟೇ ಮೂರನೇ ಬಾರಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸಿ ಸರಕಾರ ರಚನೆ ಮಾಡಿದ್ದಾರೆ. ಈ ವೇಳೆ 72 ಮಂತ್ರಿಗಳನ್ನು ಸಂಪುಟಕ್ಕೆ ಸೇರಿಸಿಕೊಂಡಿರುವ ಪ್ರಧಾನಿ ಮೋದಲ ಬಾರಿ ಸಂಸದರಾದ ನಟ ಸುರೇಶ್ ಗೋಪಿ ಅವರಿಗೂ ರಾಜ್ಯ ಖಾತೆ ನೀಡಿದ್ದಾರೆ. ಆದರೆ ಇದೀಗ ನನಗೆ ಸಚಿವ ಸ್ಥಾನ ಬೇಡ ಎಂದು ಸುರೇಶ್ ಗೋಪಿ ತಿಳಿಸಿದ್ದಾರೆ.


    ಕೇಂದ್ರದ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿದ ಸುರೇಶ್‌ ಗೋಪಿ, ನಾನು ಸಂಸದನಾಗಿ ಕಾರ್ಯನಿರ್ವಹಿಸಲು ಬಯಸುತ್ತೇನೆ ವಿನಃ, ಸಚಿವ ಸ್ಥಾನಮಾನ ಬೇಡ ಎಂಬುದಾಗಿ ತಿಳಿಸಿದ್ದಾರೆ.
    ತ್ರಿಶ್ಶೂರ್‌ ಜನತೆಗೆ ನನ್ನ ಬಗ್ಗೆ ಚೆನ್ನಾಗಿ ಗೊತ್ತಿದೆ. ಸಂಸದನಾಗಿ ನಾನು ಉತ್ತಮವಾಗಿ ಕೆಲಸ ಮಾಡುತ್ತೇನೆ ಎಂಬುದು ಜನತೆಗೆ ತಿಳಿದಿದೆ. ನನಗೆ ಸಿನಿಮಾದಲ್ಲಿ ನಟಿಸಬೇಕಾಗಿದೆ. ಈಗಾಗಲೇ ಹಲವಾರು ಸಿನಿಮಾಗಳಲ್ಲಿ ನಟಿಸುತ್ತಿದ್ದು, ಅದರ ಚಿತ್ರೀಕರಣದಲ್ಲಿ ಪಾಲ್ಗೊಳ್ಳಬೇಕಾಗಿದೆ. ಇನ್ನು ಈ ಬಗ್ಗೆ ಪಕ್ಷ ನಿರ್ಧರಿಸಲಿ ಎಂದು ಇಂಡಿಯನ್‌ ಎಕ್ಸ್‌ ಪ್ರೆಸ್‌ ಜತೆ ಮಾತನಾಡುತ್ತ ತಿಳಿಸಿದ್ದಾರೆ.

    ಪ್ರಚಾರದಲ್ಲಿ ಸುರೇಶ್‌ ಗೋಪಿ ಅವರು “ತ್ರಿಶ್ಶೂರ್‌ ನ ಕೇಂದ್ರ ಸಚಿವ, ಇದು ಮೋದಿ ಗ್ಯಾರಂಟಿ” ಎಂಬ ಸ್ಲೋಗನ್‌ ಮೊಳಗಿಸಿದ್ದರು. ಇದೀಗ ಚುನಾವಣೆಯಲ್ಲಿ ಗೆದ್ದು, ಕೇಂದ್ರದ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ನಾನು ಸಿನಿಮಾ ಇಂಡಸ್ಟ್ರೀಯನ್ನು ಬಿಡಲಾರೆ, ನಟನೆ ನನ್ನ ಹವ್ಯಾಸವಾಗಿದೆ. ಈಗಾಗಲೇ ಹಲವಾರು ಸಿನಿಮಾಗಳಲ್ಲಿ ನಟಿಸುವ ಬಗ್ಗೆ ಮಾತು ಕೊಟ್ಟಿದ್ದೇನೆ. ಹೀಗಾಗಿ ಸಚಿವ ಸ್ಥಾನ ಬೇಡ ಎಂದು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply