Connect with us

LATEST NEWS

ನಾನು ಯಾರ ಬೂಟು ನೆಕ್ಕುವ ಕೆಲಸ ಮಾಡಲಿಲ್ಲ – ಸಿಎಂಗೆ ತಿರುಗೇಟು ನೀಡಿದ ಸುಬ್ರಹ್ಮಣ್ಯನ್ ಸ್ವಾಮಿ

ನವದೆಹಲಿ: ಬಿಜೆಪಿ ಮುಖಂಡ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಒಬ್ಬ ಫ್ರೀಲ್ಯಾನ್ಸ್ ರಾಜಕಾರಣಿ ಎಂದ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸುಬ್ರಹ್ಮಣ್ಯನ್ ಸ್ವಾಮಿ ಸರಿಯಾಗಿ ತಿರುಗೇಟು ನೀಡಿದ್ದಾರೆ.


ವಿಧಾನಸಭೆ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೆಲೆ ಏರಿಕೆ ಚರ್ಚೆ ಸಂದರ್ಭ ಸುಬ್ರಹ್ಮಣ್ಯನ್ ಸ್ವಾಮಿ ಅವರ ಬೆಲೆ ಏರಿಕೆ ಬಗ್ಗೆ ಮಾಡಿರುವ ಟ್ವೀಟ್ ಗಳನ್ನು ಉಲ್ಲೇಖಿಸಿದ್ದರು. ಈ ಸಂದರ್ಭ ಉತ್ತರ ನೀಡಿದ್ದ ಸಿಎಂ ಬೊಮ್ಮಾಯಿ ಸ್ವಾಮಿ ಒಬ್ಬರು ಫ್ರೀಲ್ಯಾನ್ಸ್ ಪೊಲಿಟಿಶಿಯನ್ ಆದರೆ ಆರ್ಥಿಕ ತಜ್ಞರಾಗಿ ಜೀನಿಯಸ್ ಎಂದಿದ್ದರು.


ಈ ಸಂಬಂಧ ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ನಾನು ಸುಮ್ಮನೆ ಆರು ಸಾರಿ ಸಂಸದನಾಗಿ ಆಯ್ಕೆಯಾಗಲಿಲ್ಲ. ಅದರಲ್ಲಿಯೂ ಮೂರು ಸಾರಿ ಲೋಕಸಭೆಯಿಂದ ಆರಿಸಿ ಬಂದಿದ್ದೇನೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರಿಸಿದ ನಾನು ಅಧಿಕಾರಕ್ಕಾಗಿ ಯಾರ ಹಿಂದೆಯೂ ಬೀಳಲಿಲ್ಲ, ಯಾರ ಬೂಟು ನೆಕ್ಕುವ ಕೆಲಸ ಮಾಡಲಿಲ್ಲ ಎಂದಿದ್ದಾರೆ.

ಈಗ ಇದೇ ವಿಚಾರಕ್ಕೆ ಟಾಂಗ್ ನೀಡಿರುವ ಸ್ವಾಮಿ, ನಾನು ಯಾವ ಕಾಲದಲ್ಲಿಯೂ ಜನತಾದಳದ ಸದಸ್ಯನಾಗಿರಲಿಲ್ಲ. ಜನತಾ ಪಾರ್ಟಿ ಅಧ್ಯಕ್ಷನಾಗಿದ್ದ ಸಂದರ್ಭ(1989-2013) ಅದನ್ನು ಬಿಜೆಪಿಯೊಂದಿಗೆ ವಿಲೀನ ಮಾಡಿದೆ ಎಂದಿರುವುದು ಸಂಚಲನಕ್ಕೆ ಕಾರಣವಾಗಿದೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *