Connect with us

    KARNATAKA

    ದೇಶದಲ್ಲಿ ಹೆಚ್ಚಾಗುತ್ತಿದೆ ‘ಡಿಜಿಟಲ್ ಅರೆಸ್ಟ್’ ವಂಚನೆ ಪ್ರಕರಣಗಳು, ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ..!

    ಹೊಸದಿಲ್ಲಿ : ದೇಶದಲ್ಲಿ ಡಿಜಿಟಲ್ ಅರೆಸ್ಟ್ (Digital Arrest) ಮತ್ತು ಸೈಬರ್ ವಂಚನೆ (cyber Fraud) ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು ಈ ಕುರಿತು ತನಿಖೆ ನಡೆಸಲು ಕೇಂದ್ರ ಗೃಹ ಸಚಿವಾಲಯ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದೆ.

    ದೇಶಾದ್ಯಂತ ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆಯಲ್ಲಿ ಹಠಾತ್ ಹೆಚ್ಚಳದ ಬಗೆಗಿನ ವರದಿಯ ಬೆನ್ನಲ್ಲಿ ಈ ಕುರಿತು ತನಿಖೆಗೆ ಸಮಿತಿ ರಚಿಸಲಾಗಿದೆ. ಗೃಹ ಸಚಿವಾಲಯದ ಆಂತರಿಕ ಭದ್ರತಾ ಕಾರ್ಯದರ್ಶಿಯ ಮೇಲ್ವಿಚಾರಣೆಯಲ್ಲಿ ಈ ಉನ್ನತ ಮಟ್ಟದ ಸಮಿತಿ ರಚನೆಯಾಗಿದ್ದು  ಡಿಜಿಟಲ್ ಅರೆಸ್ಟ್ ಮತ್ತು ಸೈಬರ್ ವಂಚನೆ ಪ್ರಕರಣಗಳನ್ನು ಬಯಲಿಗೆಳೆದು ತಪ್ಪಿತಸ್ಥರ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.  ಸಚಿವಾಲಯದ ಸೈಬರ್ ಅಪರಾಧ ಸಮನ್ವಯ ಕೇಂದ್ರವು, ಸಮಿತಿಯ ಬಗ್ಗೆ ತಿಳಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸರನ್ನು ಸಂಪರ್ಕಿಸಿದೆ.  2024ರ ಆರಂಭದಿಂದ ಇಲ್ಲಿಯವರೆಗೆ, 6,000ಕ್ಕೂ ಹೆಚ್ಚು ಡಿಜಿಟಲ್ ಅರೆಸ್ಟ್ ದೂರುಗಳು ದೇಶಾದಾದ್ಯಾಂತ ದಾಖಲಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ 6 ಲಕ್ಷ ಮೊಬೈಲ್ ಸಂಖ್ಯೆಗಳನ್ನು ಈಗಾಗಲೇ ನಿರ್ಬಂಧಿಸಿದೆ ಆದ್ರೆ ಇನ್ನೂ ಕೂಡ ಇಂತಹ ಕೃತ್ಯಗಳು ಮುಂದುವರೆದಿದ್ದು ಜನ ಲಕ್ಷಾಂತರ ರೂಪಾಯಿಗಳನ್ನು ಹಾಗೂ ಮಾನಸಿಕ ನೆಮ್ಮದಿಯನ್ನು ಕಳಕೊಂಡಿದ್ದಾರೆ.  ಸೈಬರ್ ಅಪರಾಧ ಸಮನ್ವಯ ಕೇಂದ್ರವು ಕನಿಷ್ಠ 709 ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿರ್ಬಂಧಿಸಿದೆ. ಸೈಬರ್ ವಂಚನೆಗೆ ಸಂಬಂಧಿಸಿದಂತೆ 3.25 ಲಕ್ಷ ನಕಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವಂತೆಯೂ ಸೂಚಿಸಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *