LATEST NEWS
ಮಂಗಳೂರು ವಿವಿ ಗಣೇಶೋತ್ಸವ – ಅನಗತ್ಯ ವಿಚಾರಗಳ ಬಗ್ಗೆ ಹೊರಗಿನವರು ಯಾಕೆ ಮಾತನಾಡಬೇಕು – ದಿನೇಶ್ ಗುಂಡೂರಾವ್
ಮಂಗಳೂರು ಸೆಪ್ಟೆಂಬರ್ 11: ಮಂಗಳೂರು ವಿಶ್ವವಿದ್ಯಾನಿಲಯದ ಗಣೇಶೋತ್ಸವದ ಬಗ್ಗೆ ಎದ್ದಿರುವ ವಿವಾದದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದು, ಕಳೆದ 40 ವರ್ಷಗಳಿಂದ ಅಲ್ಲಿ ಗಣೇಶೋತ್ಸವ ಆಚರಿಸುತ್ತಾರೆಂಬ ಮಾಹಿತಿ ಇದೆ. ಈಗ ಯಾಕೆ ವಿವಾದ ಮಾಡಲಾಗುತ್ತಿದೆ ಎಂದು ಅರ್ಥವಾಗುತ್ತಿಲ್ಲ. ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ಮುಖ್ಯ ಚುನಾವಣೆ ಹತ್ತಿರ ಬಂದಾಗ ಈ ರೀತಿ ಅಶಾಂತಿ ಸೃಷ್ಟಿಸುವುದನ್ನು ಜನ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಂಗಳೂರು ವಿಶ್ವವಿದ್ಯಾನಿಲಯ ಈಗಾಗಲೇ ಬಿ. ಗ್ರೇಡ್‌ಗೆ ಹೋಗಿದೆ. ಅದನ್ನು ಎ ಗ್ರೇಡ್‌ಗೆ ತರಲು ಅಗತ್ಯ ಕ್ರಮಗಳನ್ನ ನಾವು ಮೊದಲು ಮಾಡಬೇಕಾಗಿದೆ. ಗಣೇಶೋತ್ಸವದ ಬಗ್ಗೆ ಮಂಗಳೂರು ವಿಶ್ವವಿದ್ಯಾನಿಲಯದ ವಿಸಿ ಹಾಗೂ ರಾಜ್ಯಪಾಲರು ಅದರ ಬಗ್ಗೆ ತೀರ್ಮಾನ ಮಾಡುತ್ತಾರೆ. ಕಲ್ಲಡ್ಕ ಪ್ರಭಾಕರ ಭಟ್ ಏನು ಮಾತನಾಡುತ್ತಾರೋ ಅದು ನಮಗೆ ಸಂಬಂಧಿಸಿದ್ದಲ್ಲ. ವಿವಿ ಶೈಕ್ಷಣಿಕವಾಗಿ ಬೆಳೆಯಬೇಕು. ಅಭಿವೃದ್ಧಿಯಾಗಬೇಕು. ಅನಗತ್ಯ ವಿಚಾರಗ ಬಗ್ಗೆ ಹೊರಗಿನವರು ಯಾಕೆ ಮಾತನಾಡಬೇಕು ಎಂದು ಪ್ರಶ್ನಿಸಿದರು.