KARNATAKA
ಡಿಪ್ಲೋಮಾ ಇನ್ನು ಪಿಯುಸಿ ವಿದ್ಯಾರ್ಹತೆಗೆ ಸಮ
ಬೆಂಗಳೂರು, ಅಕ್ಟೋಬರ್ 01: ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ ಅಧ್ಯಯನವನ್ನು ಪದವಿಪೂರ್ವ ಶಿಕ್ಷಣ (ಪಿಯುಸಿ) ವಿದ್ಯಾರ್ಹತೆಗೆ ಸಮಾನ ಎಂದು ಪರಿಗಣಿಸಿ ಸರ್ಕಾರ ಆದೇಶ ನೀಡಿದೆ.
ಸರ್ಕಾರದ ವಿವಿಧ ಹುದ್ದೆಗಳಿಗೆ ನಡೆಯುವ ನೇರ ನೇಮಕಾತಿ, ಅನುಕಂಪದ ಆಧಾರದ ಮೇಲೆ ನೇಮಕಾತಿ ಹೊಂದಲು ಮತ್ತು ಉನ್ನತ ಶಿಕ್ಷಣ ಪಡೆಯಲು ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ಶಿಕ್ಷಣವನ್ನು ಪಿಯುಸಿಗೆ ಸಮ ಎಂದು ಪರಿಗಣಿಸಬೇಕು.
2015ಕ್ಕಿಂತ ಹಿಂದಿನ ವರ್ಷಗಳಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯಡಿ ಮೂರು ವರ್ಷಗಳ ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಇಲಾಖಾ ಪರೀಕ್ಷೆಗಳ ಜತೆಗೆ ಕನ್ನಡ ಭಾಷಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ತರದ ಆದೇಶ ಮಾಡಿದ್ದಾರ
ಡಿಪ್ಲೊಮಾ ವಿದ್ಯಾರ್ಹತೆಯನ್ನು ಪಿಯುಸಿಗೆ ತತ್ಸಮಾನ ಎಂದು ಪರಿಗಣಿಸಬೇಕೆ ಬೇಡವೇ ಎ೦ಬ ಬಗ್ಗೆ ಸಾಕಷ್ಟು ಗೊಂದಲಗಳಿದ್ದವು.
ಇದನ್ನು ಬಗೆಹರಿಸುವ ಸಲುವಾಗಿ ಈ ಕುರಿತು ವರದಿ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರ ನೇತೃತ್ವದ ಸಮಿತಿ ರಚಿಸಲಾಗಿತ್ತು. ಸಮಿತಿ ನೀಡಿದ ವರದಿಯ ಮೇಲೆ ಚರ್ಚೆ ನಡೆಸಿ ಅಂತಿಮವಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಸರ್ಕಾರದ ಈ ಆದೇಶದಿಂದ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಡಿಪ್ಲೋಮಾ ವ್ಯಾಸಂಗ ಮಾಡಿದವರಿಗೆ ಸಾಕಷ್ಟು ಉದ್ಯೋಗಾವಕಾಶಗಳು ಹೆಚ್ಚಾಗಲಿದೆ.