UDUPI
ಬಾಲಕರ ಬಾಲ ಮಂದಿರಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ
ಉಡುಪಿ, ಜೂನ್ 12 : ಉಡುಪಿಯ ದೊಡ್ಡಣಗುಡ್ಡೆಯಲ್ಲಿರುವ ಸರಕಾರಿ ಬಾಲಕರ ಬಾಲ ಮಂದಿರಕ್ಕೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ
ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಾಲಮಂದಿರದಲ್ಲಿ ಮಕ್ಕಳ ಆರೋಗ್ಯದ ಕುರಿತಂತೆ ಹೆಚ್ಚಿನ ಕಾಳಜಿ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, ಮಕ್ಕಳಿಗೆ ಯಾವುದೇ ರೀತಿಯ ಕುಂದುಕೊರತೆ ಹಾಗೂ ಸಮಸ್ಯೆಗಳಾಗಂತೆ ಎಚ್ಚರಿಕೆ ವಹಿಸುವಂತೆ ಮತ್ತು ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಕೂರ್ಮರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಮ್ ಹಾಕೆ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಯತೀಶ್, ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೃಷ್ಣಪ್ಪ ಹಾಗೂ ಮತ್ತಿತರರು ಉಪಸ್ಥಿತರಿದ್ದರು.