LATEST NEWS
ಪುತ್ತೂರಿನಲ್ಲಿ ತಡೆಗೊಡೆ ಕುಸಿತ ಪ್ರಕರಣ ಮೃತರ ಕುಟುಂಬಕ್ಕೆ ಜಿಲ್ಲಾಡಳಿತದಿಂದ ತಲಾ 5 ಲಕ್ಷ ಪರಿಹಾರ
ಪುತ್ತೂರಿನಲ್ಲಿ ತಡೆಗೊಡೆ ಕುಸಿತ ಪ್ರಕರಣ ಮೃತರ ಕುಟುಂಬಕ್ಕೆ ಜಿಲ್ಲಾಡಳಿತದಿಂದ ತಲಾ 5 ಲಕ್ಷ ಪರಿಹಾರ
ಪುತ್ತೂರು ಜುಲೈ 7: ಪುತ್ತೂರಿನ ಹೆಬ್ಬಾರಬೈಲಿನಲ್ಲಿ ಮನೆ ತಡೆಗೋಡೆ ಕುಸಿದು ಮೃತಪಟ್ಟ ಕುಟುಂಬಕ್ಕೆ ಜಿಲ್ಲಾಡಳಿತ ತಲಾ 5 ಲಕ್ಷ ಪರಿಹಾರ ಘೋಷಿಸಿದೆ. ಈ ಕುರಿತಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿರುವ ಸಚಿವ ಯು.ಟಿ ಖಾದರ್ ಮಳೆ ಪರಿಸ್ಥಿತಿ ಬಗ್ಗೆ ನಿಗಾ ಇಡಲು ಸೂಚನೆ ನೀಡಿದ್ದಾರೆ.
ಮನೆಯ ಹಿಂಭಾಗದಲ್ಲಿದ್ದ ಎತ್ತರದ ತಡೆಗೋಡೆ ಕುಸಿದು ಮನೆ ಮೇಲೆ ಬಿದ್ದ ಪರಿಣಾಮ ಇಬ್ಬರು ಸಾವನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಹೆಬ್ಬಾರಬೈಲಿನಲ್ಲಿ ರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಮನೆಯ ಹಿಂಭಾಗದ ಕೊಠಡಿಯಲ್ಲಿ ಮಲಗಿದ್ದ ಅಜ್ಜಿ ಪಾರ್ವತಿ (65) ಹಾಗೂ ಮೊಮ್ಮಗ ಧನುಷ್ (12) ಮೃತಪಟ್ಟಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಸುಳ್ಯ, ಪುತ್ತೂರು, ಬೆಳ್ತಂಗಡಿ, ಮೂಡುಬಿದಿರೆ ಭಾಗದಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿದೆ. ಇದೇ ವೇಳೆ, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿದಿದ್ದು ಸ್ನಾನಘಟ್ಟ ಮುಳುಗಡೆಯಾಗಿದೆ. ಉಪ್ಪಿನಂಗಡಿ – ಸುಬ್ರಹ್ಮಣ್ಯ ಸಂಪರ್ಕಿಸುವ ರಾಜ್ಯ ಹೆದ್ದಾರಿಯ ಹೊಸ್ಮಠ ಸೇತುವೆಯೂ ಮುಳುಗಿದ್ದು ಕುಕ್ಕೆಗೆ ಆಗಮಿಸುವ ಭಕ್ತರಿಗೆ ತೊಂದರೆಯಾಗಿದೆ. ನೇತ್ರಾವತಿ ಮತ್ತು ಕುಮಾರಧಾರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ನದಿ ದಡಕ್ಕೆ ತೆರಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.