LATEST NEWS
ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆ ವಿರುದ್ಧ ಜಿಲ್ಲಾ ನಾಗರಿಕ ಸಮಿತಿ ವಿನೂತನವಾಗಿ ಪ್ರತಿಭಟನೆ

ಉಡುಪಿ, ನವೆಂಬರ್ 03: ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯ ಬಗ್ಗೆ ಹಲವು ಬಾರಿ ಇಲಾಖೆಯ ಅಧಿಕಾರಿಗಳಿಗೆ ಮನವಿ ನೀಡಿದರು ಸಹ ಯಾವುದೇ ರೀತಿಯ ಪ್ರಯೋಜನ ಆಗಿಲ್ಲ. ಹೆದ್ದಾರಿಯಲ್ಲಿ ದಾರಿದೀಪದ ವ್ಯವಸ್ಥೆ ಇಲ್ಲದ ಕಾರಣ ವಾಹನ ಸವಾರರು ತೊಂದರೆಗೀಡಾಗಿದ್ದಾರೆ.
ಮಾತ್ರವಲ್ಲದೆ ಹೆದ್ದಾರಿ ಹೊಂಡಮಯ ವಾಗಿದ್ದು ವಾಹನ ಸವಾರರಿಗೆ ರಸ್ತೆ ಕಾಣದೆ ಕೆಲವೆಡೆ ವಾಹನ ಸವಾರಿಗೆ ತೊಂದರೆಯಾದ ಘಟನೆಗಳು ನಡೆದಿದೆ. ಈ ಹಿನ್ನಲೆಯಲ್ಲಿ ನಾಗರಿಕ ಸಮಿತಿಯ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಹೆದ್ದಾರಿಯಲ್ಲಿ ದೊಂದಿಗಳನ್ನು ನೆಟ್ಟು ವಾಹನ ಸವಾರರಿಗೆ ದೊಂದಿ ಬೆಳಕಿನ ವ್ಯವಸ್ಥೆ ಮಾಡಿದ್ದಾರೆ.

ಈ ಮೂಲಕ ಕೂಡಲೇ ದಾರಿ ದೀಪಗಳನ್ನು ಅಳವಡಿಸುವಂತೆ ಇಲಾಖೆ ಪ್ರತಿಭಟನೆಯ ಮೂಲಕ ಎಚ್ಚರಿಕೆ ನೀಡಿದ್ದಾರೆ . ಒಂದು ವೇಳೆ ಇದಕ್ಕೆ ಸ್ಪಂದಿಸದಿದ್ದಲ್ಲಿ ಮುಂದೆ ಆಗುವ ಎಲ್ಲಾ ಅನಾಹುತಗಳಿಗೆ ಇಲಾಖೆಯೇ ಹೊಣೆಯಾಗಲಿದೆ ಎಂದು ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು ಎಚ್ಚರಿಸಿದ್ದಾರೆ
Video: