LATEST NEWS
ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ – ಅಂಗಾರ ಗೆ ಉಡುಪಿ ಸುನಿಲ್ ಕುಮಾರ್ ಗೆ ದಕ್ಷಿಣಕನ್ನಡ
ಮಂಗಳೂರು ಜನವರಿ 24: ಸಚಿವ ಸಂಪುಟ ವಿಸ್ತರಣೆ ಸಂಕಷ್ಟದಲ್ಲಿರುವ ರಾಜ್ಯ ಸರಕಾರ ಇದೀಗ ಜಿಲ್ಲಾ ಉಸ್ತುವಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.
ಈ ಪೈಕಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ಸುನೀಲ್ ಕುಮಾರ್, ಉಡುಪಿ ಜಿಲ್ಲೆಗೆ ಎಸ್. ಅಂಗಾರ ಕೋಟಾ ಶ್ರೀನಿವಾಸ ಪೂಜಾರಿ ಅವರು ಉತ್ತರ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ.