LATEST NEWS
ಅಪರಾಧ ಚಟುವಟಿಕೆಗಳ ಮೇಲೆ ನಿಗಾ ಇಡಲು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಸೂಚನೆ
ಅಪರಾಧ ಚಟುವಟಿಕೆಗಳ ಮೇಲೆ ನಿಗಾ ಇಡಲು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಸೂಚನೆ
ಮಂಗಳೂರು ಜುಲೈ 01: ಜಿಲ್ಲೆಯಲ್ಲಿ ನಡೆಯುವ ಮಾದಕ ವಸ್ತುಗಳ ಚಟುವಟಿಕೆ, ಅಕ್ರಮ ಗೋ ಸಾಗಾಟ ಸೇರಿದಂತೆ ಅಪರಾದ ಚಟುಚಟಿಕೆಗಳ ಮೇಲೆ ಗಂಭೀರವಾಗಿ ನಿಗಾ ಇಟ್ಟು ಅಪರಾಧಿಗಳ ಮೇಲೆ ಕೂಡ ನಿಗಾ ಇಡುವಂತೆ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ಬಗ್ಗೆ ಜಿಲ್ಲೆಯ ಶಾಸಕರೊಂದಿಗೆ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಜನತೆಯಲ್ಲಿ ವಿಶ್ವಾಸ ಮೂಡಿಸುವ ಕೆಲಸಗಳು ತುರ್ತಾಗಿ ಆಗಬೇಕು. ಕಾನೂನಿನ ಅನುಷ್ಠಾನ ಸರಿಯಾದ ಆವಧಿಯಲ್ಲಿ ಆಗಬೇಕು. ಸಣ್ಣಪುಟ್ಟ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು. ಪದೇಪದೇ ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸುವವರ ಮೇಲೆ ನಿಗಾ ಇಟ್ಟು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಜಿಲ್ಲೆಯ ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹಾ ವಿದ್ಯಮಾನಗಳನ್ನು ನಿಗ್ರಹಿಸಲು ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸ್ ಆಯುಕ್ತರು ಚರ್ಚೆ ನಡೆಸಿ ಸೂಕ್ತ ಮಾರ್ಗದರ್ಶನಗಳನ್ನು ರೂಪಿಸುವಂತೆ, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಅಕ್ರಮ ಚಟುವಟಿಕೆಗಳಿಗೆ ಯಾರ ಬೆಂಬಲವೂ ಇರುವುದಿಲ್ಲ ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೇಲ್, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.