LATEST NEWS
ಉಡುಪಿ ಹತ್ಯಾಕಾಂಡ – ತನಿಖೆ ಬಗ್ಗೆ ನಿರಂತರ ಮಾಹಿತಿ ಪಡೆಯುತ್ತಿದ್ದೇನೆ ಎಂದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ ನವೆಂಬರ್ 13: ಉಡುಪಿ ಹತ್ಯಾಕಾಂಡದ ಬಗ್ಗೆ ಕೊನೆಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದು, ಘಟನೆ ಬಗ್ಗೆ ಸೂಕ್ತ ತನಿಖೆಗೆ ಕೈಗೊಳ್ಳಲು ನಿರ್ದೇಶನ ನೀಡಿದ್ದು, ನಿರಂತರ ಮಾಹಿತಿ ಪಡೆಯುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಉಡುಪಿ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣದ ಬಗ್ಗೆ ಇದೀಗ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆ ನೀಡಿದ್ದಾರೆ. ಭೀಕರ ಘಟನೆ ನಡೆದು 24 ಗಂಟೆ ಕಳೆದರೂ ಜಿಲ್ಲಾ ಉಸ್ತುವಾರಿ ಸಚಿವರು ಈವರೆಗೆ ಯಾವುದೇ ರೀತಿಯ ಹೇಳಿಕೆ ನೀಡದಿರುವುದು ಸಾಕಷ್ಟು ಅಸಮಾಧಾನಕ್ಕೆ ಕಾರಣವಾಗಿತ್ತು.

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು ನೇಜಾರುವಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಅಮಾನುಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಘಟನೆ ಕುರಿತಂತೆ ಸೂಕ್ತ ತನಿಖೆ ಕೈಗೊಳ್ಳಲು ನಿರ್ದೇಶನ ನೀಡಿದ್ದೇನೆ. ಅಲ್ಲದೆ ಅವರಿಂದ ನಿರಂತರ ಮಾಹಿತಿ ಪಡೆಯುತ್ತಿದ್ದೇನೆ. ಪ್ರಕರಣ ಸಂಬಂಧ 5 ತಂಡಗಳನ್ನು ರಚಿಸಲಾಗಿದ್ದು, ಶೀಘ್ರ ಪತ್ತೆ ಮಾಡುವ ವಿಶ್ವಾಸವನ್ನು ಪೊಲೀಸ್ ವರಿಷ್ಠಾಧಿಕಾರಿಗಳು ವ್ಯಕ್ತಪಡಿಸಿದ್ದಾರೆ ಎಂದು ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.