LATEST NEWS
ಕೋವಿಡ್ 3 ನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ :ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬೊಮ್ಮಾಯಿ
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೋವಿಡ್ 3 ನೇ ಅಲೆಯನ್ನು ಎದುರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದು, ಅಗತ್ಯವಾಗಿ ಮಕ್ಕಳ ಚಿಕಿತ್ಸೆಗಾಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ಗಳ ನಿರ್ಮಾಣ , ಅಗತ್ಯ ಬೆಡ್‌ಗಳ ವ್ಯವಸ್ಥೆ ಮತ್ತು ಚೈಲ್ಡ್ ವೆಂಟಿಲೇಟರ್ ಗಳನ್ನು ಅಳವಡಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಅವರು ವೀಡಿಯೋ ಸಂವಾದದ ಮೂಲಕ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತು ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಡ್ ಪ್ರಮಾಣವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಸಚಿವ ಬೊಮ್ಮಾಯಿ, ಹೆಚ್ಚು ಕೋವಿಡ್ ಪರೀಕ್ಷೆ ನಡೆಸಿ, ಶೀಘ್ರದಲ್ಲಿ ಫಲಿತಾಂಶ ನೀಡಿ,ಸೋಂಕಿತರಿಗೆ ತಕ್ಷಣದಿಂದ ಚಿಕಿತ್ಸೆ ಆರಂಭಿಸುವ ಮೂಲಕ ಪಾಸಿಟಿವಿಟಿ ಪ್ರಮಾಣ ಹೆಚ್ಚಾಗದಂತೆ ತಡೆಯಲು ಸಾಧ್ಯವಿದೆ . ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗೆ ಒಳಪಡಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಬ್ಲಾಂಕ್ ಫಂಗಸ್ ಚಿಕಿತ್ಸಗೆ ಅಗತ್ಯವಿರುವ ಔಷಧಗಳನ್ನು ಶೀಘ್ರದಲ್ಲಿ ಸರಬರಾಜು ಮಾಡಲಾಗುವುದು ಎಂದ ಸಚಿವರು, ಕೋವಿಡ್ ಕೇರ್ ಸೆಂಟರ್ ಗಳಿಗೆ ಆಕ್ಸಿಜಿನ್ ಕಾಂನ್ಸ್ನ್‌ಟ್ರೇಟರ್ ಗಳನ್ನು ಅಳವಡಿಸಿ, ರೋಗಿಗಳಿಗೆ ವೆಂಟಿಲೇಟರ್ ಗಳ ಸಮಸ್ಯೆಯಗದಂತೆ ಎಚ್ಚರವಹಿಸಿ, ಜಿಲ್ಲೆಯಲ್ಲಿ ಸಾವಿನ ಪ್ರಮಾಣವನ್ನು ತಗ್ಗಿಸಲು ಕ್ರಮ ಕೈಗೊಳ್ಳಿ ಎಂದರು.