Connect with us

DAKSHINA KANNADA

ದಿಯಾ ಖ್ಯಾತಿಯ ನಟ ಪೃಥ್ವಿ ಅಂಬರ್ ತಾಯಿ ನಿಧನ

ಮಂಗಳೂರು, ಜುಲೈ 16: ಚಂದನವನದ ಉದಯೋನ್ಮುಖ ನಟ, ದಿಯಾ ಖ್ಯಾತಿಯ ನಟ ಪೃಥ್ವಿ ಅಂಬಾರ್‌ ತಾಯಿ ಹೃದಯ ಸಂಬಂಧಿ ಕಾಯಿಲೆಯಿಂದ ಇಂದು ಮಂಗಳೂರಿನಲ್ಲಿ ನಿಧನರಾಗಿದ್ದಾರೆ.

ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ  ಜುಲೈ 15 ರಂದು ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಸುಜಾತ ಅವರು ವೀರಪ್ಪ ಅಂಬರ್ ಅವರ ಧರ್ಮಪತ್ನಿಯಾಗಿದ್ದು, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ದುರ್ಗಾಪರಮೇಶ್ವರಿ ಮಹಿಳಾ ಸಂಘದ ಕಾರ್ಯದರ್ಶಿಯಾಗಿದ್ದ ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

ಇನ್ನೂ ಇವರ ಪುತ್ರ ನಟ ಪೃಥ್ವಿ ಅಂಬರ್‌ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದು, ದಿಯಾ ಸಿನಿಮಾ ಮೂಲಕ ಸಾಕಷ್ಟು ಹೆಸರು ಮಾಡಿದ್ದಾರೆ. ಇತ್ತೀಚೆಗೆ ತೆರೆಕಂಡ ಬೈರಾಗಿ ಮತ್ತು ಶುಗರ್ ಲೆಸ್ ಚಿತ್ರದಲ್ಲಿ ಪೃಥ್ವಿ ಅಂಬರ್ ನಟಿಸಿದ್ದಾರೆ. ಚಿತ್ರಗಳ ಸಕ್ಸಸ್​ನ್ನು ಖುಷಿ ಪಡೋ ಸಮಯದಲ್ಲಿ ನಟ ತಮ್ಮ ತಾಯಿಯನ್ನು ಕಳೆದುಕೊಂಡಿದ್ದಾರೆ.

ಪೃಥ್ವಿ ಅಂಬಾರ್ ಧಾರಾವಾಹಿ ಮೂಲಕ ಬಣ್ಣದ ಬದುಕು ಆರಂಭಿಸಿದವರು. 2008ರಲ್ಲಿ ಪ್ರಸಾರವಾದ ‘ರಾಧಾ ಕಲ್ಯಾಣ’ ಧಾರಾವಾಹಿಯಿಂದ ಹಿಡಿದು ಈಗ ಪ್ರಸಾರವಾಗುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಸೇರಿ ಅನೇಕ ಧಾರಾವಾಹಿಯಲ್ಲಿ ಅವರು ನಟಿಸಿದ್ದಾರೆ. ಅವರಿಗೆ ಸಾಕಷ್ಟು ಖ್ಯಾತಿ ತಂದುಕೊಟ್ಟ ಚಿತ್ರ ‘ದಿಯಾ’. 2020ರ ಆರಂಭದಲ್ಲಿ ತೆರೆಕಂಡ ಈ ಸಿನಿಮಾ ಸೂಪರ್ ಹಿಟ್ ಆಯಿತು. ಅಲ್ಲಿಂದ ಪೃಥ್ವಿಗೆ ಹೆಚ್ಚು ಆಫರ್​ಗಳು ಬರೋಕೆ ಆರಂಭ ಆದವು. ಶಿವರಾಜ್​ಕುಮಾರ್ ನಟನೆಯ ‘ಬೈರಾಗಿ’ ಚಿತ್ರದಲ್ಲಿ ವಾತಾಪಿ ಹೆಸರಿನ ಪಾತ್ರವನ್ನು ಪೃಥ್ವಿ ಮಾಡಿದ್ದರು. ಈ ಪಾತ್ರ ಸಖತ್ ಹೈಲೈಟ್ ಆಗಿತ್ತು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *